ADVERTISEMENT

ಸ್ವಾಮೀಜಿ ಹೇಳಿಕೆಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2017, 5:38 IST
Last Updated 7 ನವೆಂಬರ್ 2017, 5:38 IST

ಹೂವಿನಹಡಗಲಿ: ಹುಬ್ಬಳ್ಳಿಯ ಲಿಂಗಾಯತ ಪ್ರತ್ಯೇಕ ಧರ್ಮದ ಸಮಾವೇಶದಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವೀರಶೈವ ಲಿಂಗಾಯತರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ ಎಂದು ಇಲ್ಲಿನ ವೀರಶೈವ ಲಿಂಗಾಯಿತ ಅನುಯಾಯಿಗಳು ತಿಳಿಸಿದ್ದಾರೆ.

ಸೋಮವಾರ ತಹಶೀಲ್ದಾರರಿಗೆ ಮನವಿ ಸಲ್ಲಿಸಿರುವ ಮುಖಂಡರು, ‘ಸಮಾವೇಶದಲ್ಲಿ ಭಾಗವಹಿಸಿದ್ದ ಜನರ ಓಲೈಕೆಗಾಗಿ ಜಯಮೃತ್ಯುಂಜಯ ಸ್ವಾಮೀಜಿ ವೀರಶೈವ ಲಿಂಗಾಯತ ಸಮಾಜದ 99 ಉಪ ಪಂಗಡದ ಅನುಯಾಯಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವುದು ಖಂಡನೀಯ‘ ಎಂದು ತಿಳಿಸಿದ್ದಾರೆ.

ಎಸ್.ಎಂ.ಬಸವರಾಜ್, ಎಂ.ಪಿ.ಎಂ.ಮಂಜುನಾಥ, ಎಂ.ಪಿ.ಎಂ.ವಾಗೀಶ್, ಬಿ.ಮಲ್ಲಯ್ಯ, ಎ.ಎಂ.ಶಾಂತಯ್ಯ, ಪಕ್ಕೀರಗೌಡ್ರು, ಎಚ್.ಎಂ.ಶಶಿಧರ, ನವಲಿ ಶಿವಕುಮಾರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.