ADVERTISEMENT

ಸಂಡೂರು ಬಂದ್‌ಗೆ ಉತ್ತಮ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2018, 9:17 IST
Last Updated 31 ಜನವರಿ 2018, 9:17 IST

ಸಂಡೂರು: ಕಾರ್ಮಿಕರಿಗೆ ಉದ್ಯೋಗ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ  ಜಿಲ್ಲಾ ಗಣಿ ಕಾರ್ಮಿಕ ಸಂಘ ಕರೆ ನೀಡಿದ್ದ ಸಂಡೂರು ಬಂದ್‌ಗೆ ಮಂಗಳವಾರ ಉತ್ತಮ ಪ್ರತಿಕ್ರಿಯೆ ದೊರೆಯಿತು.

ಬಂದ್ ಪ್ರಯುಕ್ತ ಅದಿರು ಸಾಗಣೆ ಲಾರಿ, ಪ್ರಯಾಣಿಕರ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಶಾಲಾ ಕಾಲೇಜುಗಳು, ಅಂಗಡಿ ಮುಂಗಟ್ಟುಗಳು, ಹೋಟೆಲ್‌ಗಳು ಬಂದ್ ಆಗಿದ್ದವು.

ಗಣಿ ಪ್ರದೇಶ, ಕಾರ್ಖಾನೆ, ಶಾಲಾ ಕಾಲೇಜುಗಳು ಹಾಗೂ ಪರಸ್ಥಳಗಳಿಗೆ ಹೋಗಲೆಂದು ನಿಲ್ದಾಣಕ್ಕೆ ಬಂದಿದ್ದ ಕಾರ್ಮಿಕರು, ಸಾರ್ವಜನಿಕರು, ವಿದ್ಯಾರ್ಥಿಗಳು ಮನೆಗಳಿಗೆ ತೆರಳಿದರು.

ADVERTISEMENT

ಪಟ್ಟಣದ ವಿಜಯವೃತ್ತದಲ್ಲಿ ನಡೆದ ಕಾರ್ಮಿಕರ ಸಭೆಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಆರ್. ಮಾನಸಯ್ಯ, ‘ಕೇಂದ್ರ ಸರ್ಕಾರ ಹಾಗೂ ಅಕ್ರಮ ಗಣಿಗಾರಿಕೆಯ ವಿರುದ್ಧ ತೊಡೆ ತಟ್ಟಿ ಪಾದಯಾತ್ರೆ ನಡೆಸಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕಾರ್ಮಿಕ –ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. 2011ರಲ್ಲಿ ಗಣಿಗಾರಿಕೆ ನಿಷೇಧಗೊಂಡ ನಂತರ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಸರ್ಕಾರ ಕ್ರಮ ಕೈಗೊಂಡಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.