ADVERTISEMENT

ಕಾಂಗ್ರೆಸ್‌ನ ಪಕ್ಷಾಂತರ ರಾಜಕೀಯ ಅವರಿಳಿದಿರುವ ಮಟ್ಟ ಸೂಚಿಸುತ್ತೆ : ಎಚ್.ಆರ್.ಗವಿಯಪ್ಪ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2018, 6:12 IST
Last Updated 11 ಫೆಬ್ರುವರಿ 2018, 6:12 IST
ಎಚ್.ಆರ್.ಗವಿಯಪ್ಪ
ಎಚ್.ಆರ್.ಗವಿಯಪ್ಪ   

ಹೊಸಪೇಟೆ: 'ರಾಹುಲ್ ಗಾಂಧಿಯವರ ಮುಂದೆ ಬಿಜೆಪಿ ಮುಖಂಡರನ್ನು ಕರೆದು ಬರಮಾಡಿಕೊಂಡಿರುವುದು ನೋಡಿದರೆ ಕಾಂಗ್ರೆಸ್ ಯಾವ ಮಟ್ಟಕ್ಕೆ ಇಳಿದಿದೆ ಎನ್ನುವುದು ಗೊತ್ತಾಗುತ್ತದೆ' ಎಂದು ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಮಾಜಿಶಾಸಕ ಎಚ್.ಆರ್.ಗವಿಯಪ್ಪ ತಿಳಿಸಿದರು.

ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ಅನೇಕ ವರ್ಷಗಳಿಂದ ಕಾಂಗ್ರೆಸ್‌ಗೆ ದುಡಿಯುತ್ತಿದ್ದೇವೆ. ನಮ್ಮನ್ನು ಕಡೆಗಣಿಸಿ ಬಿಜೆಪಿ ಶಾಸಕರನ್ನು ಪಕ್ಷಕ್ಕೆ ಕರೆದುಕೊಂಡು ಅನೇಕ ಜನರಿಗೆ ಅನ್ಯಾಯ ಮಾಡಿದ್ದಾರೆ’ ಎಂದು ಹೇಳಿದರು.

‘ಇತ್ತೀಚೆಗೆ ಕಾಂಗ್ರೆಸ್‌ ಸೇರಿದ ಆನಂದ್ ಸಿಂಗ್ ಬಗ್ಗೆ ನನಗೆ ಯಾವುದೇ ಬೇಸರವಿಲ್ಲ. ಅವರನ್ನು ಬರಮಾಡಿಕೊಂಡ ಕಾಂಗ್ರೆಸ್ ವರಿಷ್ಠರ ಬಗ್ಗೆ ಅಸಮಾಧಾನವಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.