ಬಳ್ಳಾರಿ: ಜಿಲ್ಲೆಯಲ್ಲಿ ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ. ಅಧಿಕಾರಿಗಳೂ ಗೂಂಡಾಗಳೇ. ಇಲ್ಲಿನ ಎಸ್ಪಿಗೆ ಕರ್ನಾಟಕದ ಪರಂಪರೆ ಬಗ್ಗೆ ತಿಳಿದಂತಿಲ್ಲ. ಪಕ್ಷದ ಸಭೆಗೆ ಅನುಮತಿ ಪಡೆಯಲು ಹೋದರೆ ‘ಗೆಟ್ ಲಾಸ್ಟ್’ ಎಂದಿದ್ದಾರೆ. ಬಳ್ಳಾರಿಯೇನು ಅವರ ಅಪ್ಪನದ್ದಾ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್) ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.
‘ಕರ್ನಾಟಕಕ್ಕಾಗಿ ನಾವು’ ಹೆಸರಲ್ಲಿ ಕೆಆರ್‌ಎಸ್ ಪಕ್ಷದ ಬೈಕ್ ಜಾಥಾ ಮಂಗಳವಾರ ಬಳ್ಳಾರಿ ತಲುಪಿತು. ಈ ವೇಳೆ ಜನರನ್ನು ಉದ್ದೇಶಿಸಿ ಅವರು ಮಾತನಾಡಿದರು.
‘ಇಲ್ಲಿನ ಅಧಿಕಾರಿಗಳಿಗೆ ಅಹಂಕಾರವಿದೆ. ಇದು ಯಾರ ಅಪ್ಪನ ಆಸ್ತಿಯಲ್ಲ, ಜಹಗೀರಲ್ಲ. ಇದು ಕನ್ನಡಿಗರ ರಾಜ್ಯ. ಯಾವುದೋ ರಾಜ್ಯದಿಂದ ಬಂದು ಇಲ್ಲಿ ಗೂಂಡಾಗಿರಿ ಮಾಡುವುದನ್ನು ಅಧಿಕಾರಿಗಳು ನಿಲ್ಲಿಸಬೇಕು. ಕೆಆರ್‌ಎಸ್ ಪಕ್ಷ ಖಾಕಿಗೆ ಹೆದರುವುದಿಲ್ಲ. ಸ್ವಲ್ಪ ಅಹಂಕಾರ ಬಿಟ್ಟು ನಡೆಯಬೇಕು. ಈ ರಾಜ್ಯದಲ್ಲಿ ಐಪಿಎಸ್ ಅಧಿಕಾರಿಗಳೂ ಜೈಲು ನೋಡಿರುವ ಉದಾಹರಣೆಗಳಿವೆ. ಇದು ಎಸ್ಪಿ ಗಮನದಲ್ಲಿರಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.