ADVERTISEMENT

ಆಮದು ಸುಂಕ ಹೆಚĬಳಕೆħ ಆಗ್ರಹ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2016, 10:49 IST
Last Updated 10 ಫೆಬ್ರುವರಿ 2016, 10:49 IST

ವಿಜಯಪುರ: ರೇಷ್ಮೆ ಆಮದು ಸುಂಕ ಇಳಿಕೆ ವಿರುದ್ಧ ಹಾಗೂ ಆಮದು ಸುಂಕವನ್ನು ಶೇ33 ಕ್ಕೆ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೇಷ್ಮೆ ಹಿತರಕ್ಷಣಾ ಹೋರಾಟ ಸಮಿತಿ  ಇದೆ ತಿಂಗಳ 26ಕ್ಕೆ ದೆಹಲಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ರಾಜ್ಯ ರೇಷ್ಮೆ ಹಿತರಕ್ಷಣಾ ಹೋರಾಟ ಸಮಿತಿ  ರಾಜ್ಯ ಸಂಚಾಲಕ ಕಲ್ಯಾಣ್‌ ಬಾಬು ಹೇಳಿದರು.

ಪಟ್ಟಣದ ರೇಷ್ಮೆ ಮಾರುಕಟ್ಟೆಯಲ್ಲಿ ಆಯೋಜಿಸಿದ್ದ ರೇಷ್ಮೆ ಬೆಳೆಗಾರರ ಸಭೆಯಲ್ಲಿ ಅವರು ಮಾತನಾಡಿದರು. ಇದೆ ತಿಂಗಳ 26 ರಂದು ರೈಲಿನಲ್ಲಿ ಹೊರಟು ದೆಹಲಿ ತಲುಪಿ 29 ರಂದು ಕೆಂದ್ರ ಸರ್ಕಾರದ ಬಜೆಟ್‌ ದಿನದಂದು ದೆಹಲಿಯ ಜಂತರ್‌ಮಂತರ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದೇವೆ, ಈ ಪ್ರತಿಭಟನೆಯಲ್ಲಿ ಹೆಚ್ಚಿನ ರೇಷ್ಮೆ ಬೆಳೆಗಾರರು ಭಾಗವಹಿಸಿ ಕೇಂದ್ರ ಸರ್ಕಾರಕ್ಕೆ ರೇಷ್ಮೆ ಬೆಳೆಗಾರರ ಸಮಸ್ಯೆ ಮನವರಿಕೆಯಾಗುವಂತೆ ಮಾಡಬೇಕು ಎಂದು ಅವರು ಹೇಳಿದರು.

ರೇಷ್ಮೆ ಉತ್ಪಾದನೆಯಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದ್ದು, ರಾಜ್ಯದ ಶೇ 40% ರೈತರು ರೇಷ್ಮೆ ನಂಬಿ ಜೀವನ ಸಾಗಿಸುತ್ತಿದ್ದಾರೆ  ಎಂದರು.
ದೆಹಲಿ ಛಲೋ ಪ್ರತಿಭಟನೆಯ ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ರೇಷ್ಮೆ ಹಿತರಕ್ಷಣಾ ಹೋರಾಟ ಸಮಿತಿ ಪದಾಧಿಕಾರಿಗಳಾದ ಕಲ್ಯಾಣ್್ ಬಾಬು: ಸೋಮಶೇಖರ್‌9986000765,  725915006, ವೆಂಕಟೇಶ್‌ 9620548255, ಕೆಂಪಣ್ಣ 9900610485, ಕೃಷ್ಣಪ್ಪ 9611628791, ಮುನಿರಾಜು 9740917830 ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.