ADVERTISEMENT

ಕೈಗೆಟಕುವ ವಿದ್ಯುತ್ ಟ್ರಾನ್ಸ್‌ಫರ್‌ಮರ್‌

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2017, 5:21 IST
Last Updated 5 ನವೆಂಬರ್ 2017, 5:21 IST

ವಿಜಯಪುರ: ಇಲ್ಲಿನ ಬೈಪಾಸ್ ರಸ್ತೆಯಲ್ಲಿರುವ ವಿದ್ಯಾರ್ಥಿ ನಿಲಯದ ಮುಂಭಾಗದಲ್ಲಿ ರಸ್ತೆ ಪಕ್ಕದಲ್ಲೇ ಅಳವಡಿಸಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಕೈಗೆಟಕುವ ಹಂತದಲ್ಲಿದ್ದು, ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಅದನ್ನು ಮೇಲಕ್ಕೆ ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯ ನಿವಾಸಿಗಳಾದ ಕಾರ್ತಿಕ್, ಲೋಕೇಶ್, ಅಂಬರೀಷ್‌, ಅಶೋಕ್ ಒತ್ತಾಯಿಸಿದ್ದಾರೆ.

ದೇವನಹಳ್ಳಿಯಿಂದ ಕೋಲಾರಕ್ಕೆ ಸಂಚಾರ ಮಾಡುವ ಬೈಪಾಸ್ ರಸ್ತೆಯಲ್ಲಿರುವ ಸ್ವಾನ್ ಸಿಲ್ಕ್ ಕಾರ್ಖಾನೆಯ ಪಕ್ಕದ ರಸ್ತೆಯ ಸಮೀಪದಲ್ಲಿರುವ ವಿದ್ಯಾರ್ಥಿನಿಲಯದ ಬಳಿ ವಿದ್ಯುತ್ ಟ್ರಾನ್ಸ್ ಫಾರ್ಮರ್‌ ಇದೆ. ಅದನ್ನು ಸಿಮೆಂಟ್ ಇಟ್ಟಿಗೆಗಳ ಮೇಲೆ ಅಳವಡಿಸಿ, ಕೈಗೆಟಕುವ ಹಂತದಲ್ಲಿ ಇಟ್ಟಿದ್ದಾರೆ.

ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತವೆ. ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ನೂರಾರು ಶಾಲಾ ಮಕ್ಕಳು ಇಲ್ಲಿ ಓಡಾಡುತ್ತಾರೆ ಎಂದಿದ್ದಾರೆ.
ಆಕಸ್ಮಿಕವಾಗಿ ವಾಹನಗಳು ಚಾಲಕರ ನಿಯಂತ್ರಣ ತಪ್ಪಿದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆಗಳಿವೆ. ಆದ್ದರಿಂದ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಗಮನಹರಿಸಿ, ಅದನ್ನು ಮೇಲ್ಮಟ್ಟದಲ್ಲಿ ಇಡಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.