ADVERTISEMENT

‘ದಕ್ಷ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿದೆ’

​ಪ್ರಜಾವಾಣಿ ವಾರ್ತೆ
Published 19 ಜುಲೈ 2017, 11:27 IST
Last Updated 19 ಜುಲೈ 2017, 11:27 IST

ದೇವನಹಳ್ಳಿ: ‘ಪ್ರಾಮಾಣಿಕ ನಿಷ್ಠಾವಂತ ಅಧಿಕಾರಿಗಳ ಆತ್ಮಸ್ಥೈರ್ಯವನ್ನು ಕುಗ್ಗಿ ಸುವ ಕೆಲಸ ಸರ್ಕಾರ ಮಾಡುತ್ತಿದೆ’ ಎಂದು ಬಿಜೆಪಿ ಹಿರಿಯ ಮುಖಂಡ ಆರ್.ಅಶೋಕ್ ಸರ್ಕಾರದ ವಿರುದ್ಧ ಹರಿಹಾಯ್ದರು. ಇಲ್ಲಿಯ ಅನಂತ ವಿದ್ಯಾನಿಕೇತನ ಶಾಲೆಯಲ್ಲಿ ಸೊಮವಾರ ರಾತ್ರಿ ನಡೆದ ಬಿಜೆಪಿ ಮುಖಂಡರ ಸಭೆಯಲ್ಲಿ ಮಾತನಾಡಿ, ‘ಇಲಾಖೆಗಳಲ್ಲಿ ನಡೆಯುತ್ತಿ ರುವ ಅಕ್ರಮ ಚಟುವಟಿಕೆಗಳ ಬಗ್ಗೆ ವರದಿ ನೀಡಿದ ಅಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆ ಎಂದರೆ ಭ್ರಷ್ಟಾಚಾರಕ್ಕೆ  ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಭಾವಿಸಬೇಕಾಗುತ್ತದೆ’ ಎಂದು ಹೇಳಿದರು.

ಆಷಾಢದ ನಂತರ: ಮುಖಂಡ ವಿ.ವಿ. ನಾರಾಯಣಸ್ವಾಮಿ ಮಾತನಾಡಿ, ‘ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ದಿ.ಎಸ್. ರಾಮಯ್ಯ ಮತ್ತು ಬಚ್ಚೆಗೌಡ ಅವರಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮತ್ತು ಕಿರಿಯ ಮುಖಂಡರಿಗೆ ಹಾಗೂ ನಿಷ್ಠಾ ವಂತ ಕಾರ್ಯಕರ್ತರಿಗೆ ಗೌರವವಿತ್ತು. ಪ್ರಸ್ತುತ ತಾಲ್ಲೂಕಿನಲ್ಲಿ ಕಾಂಗ್ರೆಸ್ ಅಧೋ ಗತಿಗೆ ಇಳಿದಿದೆ. ಇದೆ ಆಶಾಢ ಮಾಸ ಕಳೆದ ನಂತರ ಬಿಜೆಪಿ ಪಕ್ಷದಲ್ಲಿ ಅಧಿಕೃತ ವಾಗಿ ಸೇರ್ಪಡೆಯಾಗುತ್ತೇನೆ’ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ರಾಜಣ್ಣ, ಉಪಾಧ್ಯಕ್ಷ ಎಚ್.ಎಂ.ರವಿಕುಮಾರ್, ಮಾಜಿ ಶಾಸಕ ಜಿ.ಚಂದ್ರಣ್ಣ, ಹಾಪ್ ಕಾಪ್‌ಕಾಮ್ಸ್ ನಿರ್ದೇಶಕ ಪಿ.ನಂಜಪ್ಪ, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಗುರುಸ್ವಾಮಿ ಉಪಸ್ಥಿತರಿದ್ದರು.

ADVERTISEMENT

ಭೂ ನ್ಯಾಯ ಮಂಡಳಿ ಮಾಜಿ ಸದಸ್ಯ ಡಿ.ಆರ್. ನಾರಾಯಣಸ್ವಾಮಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ನಾಗರಾಜ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್, ಕೇಶವ, ಬಿಜೆಪಿ ಮುಖಂಡ ನಾರಾಯಣಗೌಡ, ಕೆಂಪೇಗೌಡ, ಬೂದಿ ಗೆರೆ ನಾರಾಯಣಸ್ವಾಮಿ, ಬಿಜೆಪಿ ಎಸ್ಸಿ ಮೊರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ನಾಗರಾಜ್, ಎಸ್ಟಿ ಮೋರ್ಚಾ ಜಿಲ್ಲಾ ಘಟಕ ಅಧ್ಯಕ್ಷ ತಮ್ಮಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.