ADVERTISEMENT

ನಿರಾಶ್ರಿತ ಕುಟುಂಬಗಳಿಗೆ ಉದ್ಯೋಗಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 31 ಜನವರಿ 2017, 9:17 IST
Last Updated 31 ಜನವರಿ 2017, 9:17 IST
ನಿರಾಶ್ರಿತ ಕುಟುಂಬಗಳಿಗೆ ಉದ್ಯೋಗಕ್ಕೆ ಒತ್ತಾಯ
ನಿರಾಶ್ರಿತ ಕುಟುಂಬಗಳಿಗೆ ಉದ್ಯೋಗಕ್ಕೆ ಒತ್ತಾಯ   
ವಿಜಯಪುರ: ‘ಸಂಘಟನೆಗಳು ನಿಸ್ವಾರ್ಥ ಸೇವೆ ಮೂಲಕ ಸಮಾಜದ ಏಳಿಗೆಗೆ ನಾಂದಿಯಾಗಬೇಕು’ ಎಂದು ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆ ರಾಜ್ಯ  ಘಟಕದ ಅಧ್ಯಕ್ಷ ನಾಗೇನಹಳ್ಳಿ ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.
 
ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ರೆಡ್ಡಿಹಳ್ಳಿ ಗ್ರಾಮದಲ್ಲಿ ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ ವತಿಯಿಂದ ಆಯೋಜಿಸಿದ್ದ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
 
ದೇವನಹಳ್ಳಿ ತಾಲ್ಲೂಕಿನಲ್ಲಿ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣವಾದ ನಂತರ ಭೂಮಿಯ ಬೆಲೆ ಹೆಚ್ಚಾಗಿದ್ದು , ಈ ಭಾಗದಲ್ಲಿನ ರೈತರ ಭೂಮಿಯನ್ನು ಕೈಗಾರಿಕೆಗಳ ನಿರ್ಮಾಣಕ್ಕೆಂದು ತೆಗೆದುಕೊಂಡಿದ್ದಾರೆ. ಭೂಮಿಯನ್ನು ಕೊಟ್ಟಿರುವ ರೈತರ ಕುಟುಂಬಗಳಲ್ಲಿನ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಟ್ಟಿಲ್ಲ ಎಂದರು. 
 
ತಾಲ್ಲೂಕು ಘಟಕದ  ಅಧ್ಯಕ್ಷ ಚಂದ್ರು ಮಾತನಾಡಿ, ಗ್ರಾಮಗಳಲ್ಲಿ ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆ ಸಂಘಟನೆ ಶಾಖೆಯನ್ನು ತೆರೆಯಲಾಗುತ್ತಿದ್ದು. ಸದೃಢ ಸಮಾಜದ ನಿರ್ಮಾಣಕ್ಕಾಗಿ ಯುವಕರು ಸಂಘಟಿತರಾಗಬೇಕು ಎಂದರು.
 
ಜಿಲ್ಲಾ ಕಾರ್ಯದರ್ಶಿ ಸೋಮತ್ತನಹಳ್ಳಿ ಮಂಜುನಾಥ್, ರಾಜ್ಯ ಸಮಿತಿ ಸದಸ್ಯರಾದ ನಾಗೇಶ್, ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ಟಿ.ರವಿ, ಜಿಲ್ಲಾ ಘಟಕದ ಅಧ್ಯಕ್ಷ ರೆಡ್ಡಿ, ಜಿಲ್ಲಾ ರೈತ ಘಟಕದ ಅಧ್ಯಕ್ಷ ಜಯರಾಮಯ್ಯ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಚೇತನ್, ಜಿಲ್ಲಾ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಆರ್.ವಿ ಮಂಜುನಾಥ್, ತಾಲ್ಲೂಕು ಉಪಾಧ್ಯಕ್ಷ ಎನ್.ಕೆ ರವಿಕುಮಾರ್, ತಾಲ್ಲೂಕು ರೈತ ಘಟಕದ ಗೌರವಾಧ್ಯಕ್ಷ ಪಿ.ರಘು, ಹಾಗೂ ಚನ್ನರಾಯಪಟ್ಟಣ ಹೋಬಳಿ ಅಧ್ಯಕ್ಷ ಆರ್.ಎಂ ದೇವರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.