ADVERTISEMENT

ನಿರ್ದೇಶಕರಿಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2015, 10:10 IST
Last Updated 4 ಸೆಪ್ಟೆಂಬರ್ 2015, 10:10 IST

ದೇವನಹಳ್ಳಿ: ‘ಹಲವು ವರ್ಷಗಳಿಂದ ಸಹಕಾರಿ ಕ್ಷೇತ್ರ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದ ಬಿಜೆಪಿ ಹಾಪ್‌ಕಾಮ್ಸ್ ಚುನಾವಣೆಯಲ್ಲಿ ಎರಡು ಸ್ಥಾನಗಳಿಸುವ ಮೂಲಕ ತಳವೂರುವಲ್ಲಿ ಯಶಸ್ವಿಯಾಗಿದೆ’ ಎಂದು ಜಿ.ಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಬಿ. ರಾಜಣ್ಣ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ  ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹಾಪ್‌ಕಾಮ್ಸ್‌ನ ನಾಲ್ಕು ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 2 ಬಿಜೆಪಿ, 2ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಜಿಲ್ಲೆಯಲ್ಲಿ ಮತದಾರರು ತಿರುಗೇಟು ನೀಡಿ ಹೀನಾಯ ಸೋಲಿನ ದವಡೆಗೆ ತಳ್ಳಿದ್ದಾರೆ. ಇದರಿಂದ ಕಾಂಗ್ರೆಸ್‌ನಲ್ಲಿ ಮುಖಂಡರ ಕೊರತೆ ಎದ್ದು ಕಾಣುತ್ತಿದೆ. ಹಲವು ವರ್ಷಗಳಿಂದ ಇದೆ ಪರಿಸ್ಥಿತಿ ಕಾಂಗ್ರೆಸ್ ಪಕ್ಷದ್ದಾಗಿದೆ ಎಂದರು.

ಆಯ್ಕೆಗೊಂಡಿರುವ ನೂತನ ಹಾಪ್‌ಕಾಮ್ಸ್‌ ನಿರ್ದೇಶಕ ನಂಜಪ್ಪ ಮಾತನಾಡಿ, ‘ತೋಟಗಾರಿಕಾ ಬೆಳೆಗಾರರ ಸಮಸ್ಯೆ, ಮಾರುಕಟ್ಟೆ ವ್ಯವಸ್ಥೆ, ಲಾಭನಷ್ಟದ ಬಗ್ಗೆ ಅರಿವಿದೆ.  ರೈತರು ಬೆಳೆದ ಉತ್ಪನ್ನಗಳನ್ನು ಅವರ ಮನೆ ಬಾಗಿಲಿನಿಂದ ನೇರವಾಗಿ ಖರೀದಿಸಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆದ್ಯತೆ ನೀಡಲಾಗುವುದು. ಅಲ್ಲದೆ ರೈತರು ಬೆಳೆದ ತರಕಾರಿಗಳನ್ನು ಅಕ್ಷರ ದಾಸೋಹಕ್ಕೆ ಪೂರೈಕೆ ಮಾಡಿದರೆ ಸ್ವಲ್ಪಮಟ್ಟಿಕ್ಕೆ ಆರ್ಥಿಕ ಚೈತನ್ಯ ತುಂಬುದ ಕೆಲಸ ಆಗಲಿದೆ ಗುಣಮಟ್ಟದ ಬಗ್ಗೆ ಗಮನಹರಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.