ADVERTISEMENT

ನೀರಿಗಾಗಿ ಘರ್ಷಣೆ, ಇರಿತ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2018, 6:50 IST
Last Updated 7 ಮಾರ್ಚ್ 2018, 6:50 IST

ವಿಜಯಪುರ: ಕುಡಿಯುವ ನೀರಿನ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.

ಹೋಬಳಿಯ ವೆಂಕಟೇನಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ಗಲಾಟೆ ನಡೆದಿದ್ದು, ಮುನಿನಾರಾಯಣಮ್ಮ, ಮಧುಶ್ರೀ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳವಾರ ಬೆಳಿಗ್ಗೆ ಪುನಃ ಘರ್ಷಣೆ ನಡೆದಿದ್ದು, ಭಾಗ್ಯಮ್ಮ ಗಾಯಗೊಂಡಿದ್ದಾರೆ. ಮತ್ತೊಂದು ಗುಂಪಿನ ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಮುನಿಕೃಷ್ಣಪ್ಪ ಹೊಟ್ಟೆಗೆ ಚಾಕುವಿನಿಂದ ಇರಿದಿರುವ ಪರಿಣಾಮ ಚಿಕ್ಕಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಘಟನೆಯಲ್ಲಿ ವಿಜೇಂದ್ರ 
ಗಾಯಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.