ADVERTISEMENT

ಬೂದಿಗೆರೆ: ಸಂತೆ ವಹಿವಾಟಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 16 ಮೇ 2017, 6:31 IST
Last Updated 16 ಮೇ 2017, 6:31 IST
ದೇವನಹಳ್ಳಿ ತಾಲ್ಲೂಕು ಬೂದಿಗೆರೆ ಗ್ರಾಮದ ಸಂತೆ ಅಂಗಡಿ ಮಳಿಗೆ ಹಾಗೂ ಸಂತೆ ನಡೆಯುವ ಸ್ಥಳಕ್ಕೆ ಗ್ರಾಪಂ ಅಧ್ಯಕ್ಷ ಶ್ರೀನಿವಾಸ್‌ಗೌಡ, ತಾಪಂ ಮಾಜಿ ಸದಸ್ಯ ಲಕ್ಷ್ಮಣ್‌ಗೌಡ ಚಾಲನೆ ನೀಡುತ್ತಿರುವುದು
ದೇವನಹಳ್ಳಿ ತಾಲ್ಲೂಕು ಬೂದಿಗೆರೆ ಗ್ರಾಮದ ಸಂತೆ ಅಂಗಡಿ ಮಳಿಗೆ ಹಾಗೂ ಸಂತೆ ನಡೆಯುವ ಸ್ಥಳಕ್ಕೆ ಗ್ರಾಪಂ ಅಧ್ಯಕ್ಷ ಶ್ರೀನಿವಾಸ್‌ಗೌಡ, ತಾಪಂ ಮಾಜಿ ಸದಸ್ಯ ಲಕ್ಷ್ಮಣ್‌ಗೌಡ ಚಾಲನೆ ನೀಡುತ್ತಿರುವುದು   

ವಿಜಯಪುರ: ‘ಗ್ರಾಮೀಣ ಭಾಗದಲ್ಲಿ ವಾರಕ್ಕೊಂದು ದಿನ ಸಂತೆ ನಡೆದರೆ ರೈತರಿಗೆ ತಾವು ಬೆಳೆದ ಬೆಳೆಗಳನ್ನು ಸಾಗಾಣಿಕೆ ಮಾಡಲು ಅನುಕೂಲವಾಗುತ್ತದೆ’ ಎಂದು ಬೂದಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್‌ಗೌಡ ಹೇಳಿದರು.

ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮದಲ್ಲಿ ಸಂತೆ ಮಳಿಗೆಗಳಲ್ಲಿ ವ್ಯಾಪಾರ ವಹಿವಾಟಿಗೆ  ಚಾಲನೆ ನೀಡಿ ಅವರು  ಮಾತನಾಡಿದರು.

ಬೂದಿಗೆರೆ ಗ್ರಾಮದಲ್ಲಿ ಸುಮಾರು 10 ಸಾವಿರ ಜನಸಂಖ್ಯೆ ಇದೆ, ಈ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಸಂತೆ ವ್ಯಾಪಾರ ನಡೆಯುತ್ತಿತ್ತು,  2–3 ವರ್ಷಗಳಿಂದ ಸ್ಥಗಿತಗೊಂಡಿತ್ತು. ಪುನಃ ಪ್ರಾರಂಭ ಮಾಡಲಾಗುತ್ತಿದೆ. ಪ್ರತಿ ವಾರಕ್ಕೊಮ್ಮೆ ಗುರುವಾರ ಸಂತೆ ನಡೆಯಲಿದೆ. ಇದಕ್ಕಾಗಿ ಗ್ರಾಮ ಪಂಚಾಯಿತಿ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತದೆ ಎಂದರು.

ADVERTISEMENT

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮಣ್‌ಗೌಡ ಮಾತನಾಡಿ, ಸಂತೆಗಳಲ್ಲಿ ವ್ಯಾಪಾರ ವಹಿವಾಟು ನಡೆಸುವುದಷ್ಟೆ ಅಲ್ಲದೆ ಸಂತೆಯ ಮೈದಾನವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು.

ಗ್ರಾಮ ಪಂಚಾಯಿತಿ  ಮಾಜಿ ಅಧ್ಯಕ್ಷೆ ಶಾರದಮ್ಮ ಶ್ರೀನಿವಾಸ್, ಸದಸ್ಯರಾದ ರಾಮಾಂಜಿನೇಯ ದಾಸ್, ರೇಷ್ಮೆ ಬೆಳೆಗಾರರ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಹಿತ್ತರಹಳ್ಳಿ ರಮೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಮುಂತಾದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.