ADVERTISEMENT

ಮತ್ತೆ ಗೆಲುವು ನಿಶ್ಚಿತ: ಶಾಸಕ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2017, 10:26 IST
Last Updated 3 ಸೆಪ್ಟೆಂಬರ್ 2017, 10:26 IST
ಚನ್ನರಾಯಪಟ್ಟಣ ಹೋಬಳಿ ಕೊಂಡೇನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡ ಯುವಕರನ್ನು ಶಾಸಕ ಪಿಳ್ಳಮುನಿಶಾಮಪ್ಪ ಪಕ್ಷಕ್ಕೆ ಬರಮಾಡಿಕೊಂಡರು
ಚನ್ನರಾಯಪಟ್ಟಣ ಹೋಬಳಿ ಕೊಂಡೇನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡ ಯುವಕರನ್ನು ಶಾಸಕ ಪಿಳ್ಳಮುನಿಶಾಮಪ್ಪ ಪಕ್ಷಕ್ಕೆ ಬರಮಾಡಿಕೊಂಡರು   

ಕೊಂಡೇನಹಳ್ಳಿ (ವಿಜಯಪುರ ): ‘2018 ರ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವೇ ಗೆಲುವು ಸಾಧಿಸಲಿದೆ’ ಎಂದು ಶಾಸಕ ಪಿಳ್ಳಮುನಿಶಾಮಪ್ಪ ವಿಶ್ವಾಸ ವ್ಯಕ್ತಪಡಿಸಿದರು. ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಕೊಂಡೇನಹಳ್ಳಿ ಗ್ರಾಮದಲ್ಲಿ, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡು ಯುವಕರನ್ನು ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು.

‘ಕೇವಲ ಜೆಡಿಎಸ್ ಪಕ್ಷದಿಂದ ಮಾತ್ರವೇ ಗೆಲುವು ಸಾಧ್ಯ’ ಎನ್ನುವುದನ್ನು ಕ್ಷೇತ್ರದ ಮತದಾರರು ಅರಿತುಕೊಂಡಿದ್ದಾರೆ. ‘ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ ಎಲ್ಲಾ ಗ್ರಾಮಗಳಲ್ಲೂ ಗ್ರಾಮೀಣಾಭಿವೃದ್ಧಿ, ನೈರ್ಮಲ್ಯ, ಕುಡಿಯುವ ನೀರು ಪೂರೈಕೆ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಕಾಂಕ್ರೀಟ್ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ.

ಬಮೂಲ್, ಹಾಪ್‌ ಕಾಮ್ಸ್, ಪಿಕಾರ್ಡ್ ಬ್ಯಾಂಕ್ ಸೇರಿದಂತೆ ಹಲವಾರು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷವನ್ನು ಜನರು ಬೆಂಬಲಿಸಿದ್ದಾರೆ ’ಎಂದರು.
ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ.ಶ್ರೀನಿವಾಸ್ ಮಾತನಾಡಿ, ‘ಪಕ್ಷದ ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚಿನ ಪ್ರಾದಾನ್ಯತೆ ನೀಡಬೇಕು’ ಎಂದರು.

ADVERTISEMENT

ಚನ್ನರಾಯಪಟ್ಟಣ ಜೆಡಿಎಸ್ ಹೋಬಳಿ ಅಧ್ಯಕ್ಷ ಮುನಿರಾಜು, ಗಂಗವಾರ- ಚೌಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯರಾಮೇಗೌಡ, ಸದಸ್ಯರಾದ ಎಂ. ರಾಜಣ್ಣ, ಸುಜಾತ ನಾರಾಯಣಸ್ವಾಮಿ, ಪ್ರಿಕಾರ್ಡ್ ಬ್ಯಾಂಕ್ ನಿರ್ದೇಶಕ ಶ್ರೀರಾಮಪ್ಪ, ತಾಲ್ಲೂಕು ಸೊಸೈಟಿ ನಿರ್ದೇಶಕ ಮನೋಹರ್, ಎಸ್.ಗುರಪ್ಪ, ಐಬಸಾಪುರ ಎಂ.ಪಿ.ಸಿ.ಎಸ್ ಅಧ್ಯಕ್ಷ ರಾಜಣ್ಣ, ಕಗ್ಗಲಹಳ್ಳಿ ಎಂ.ಪಿ.ಸಿ.ಎಸ್ ಅಧ್ಯಕ್ಷ ಕಾಟೇರಪ್ಪ, ಚನ್ನಹಳ್ಳಿ ಗ್ರಾಮ ಪಂಚಾ ಯಿತಿ ಸದಸ್ಯೆ ಅಂಜಲಿ ಮುನಿಯಪ್ಪ, ಮುಖಂಡರಾದ ಕೃಷ್ಣಮೂರ್ತಿ, ದೇವರಾಜ್, ನಲ್ಲೂರಿನ ಕದಿರಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.