ADVERTISEMENT

ಮಹಿಳಾ ರಕ್ಷಣೆ: ನೃತ್ಯ ರೂಪದ ಸಂದೇಶ

ರೂಬಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 9 ಜನವರಿ 2017, 10:04 IST
Last Updated 9 ಜನವರಿ 2017, 10:04 IST
ವಿಜಯಪುರ: ‘ಹೆಣ್ಣು ಮಕ್ಕಳ ರಕ್ಷಣೆಗಾಗಿ ಪ್ರತಿಯೊಬ್ಬ ನಾಗರಿಕರು ಮುಂದಾಗಬೇಕು. ಪ್ರತಿಯೊಂದು ಹೆಣ್ಣು ಮಗು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಬೇಕು’ ಎಂದು ರೂಬಿ ಆಂಗ್ಲ ಶಾಲೆಯ ಅಧ್ಯಕ್ಷ ರಫಿಕ್ ಹೇಳಿದರು.
 
ಪಟ್ಟಣದ ಗಿರಿಜಾಶಂಕರ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿದ್ದ 19 ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ  ಅವರು ಮಾತನಾಡಿದರು.
 
ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನತೆ ಅಗತ್ಯವಾಗಿದ್ದು ಸಮಾನತೆ ಬರಬೇಕಾದರೆ ಮೌಲ್ಯಾಧಾರಿತ ಶಿಕ್ಷಣದ ಅಗತ್ಯತೆ ಹೆಚ್ಚಾಗಿದ್ದು ಇಂತಹ ಶಿಕ್ಷಣ ನೀಡಲು ಪೋಷಕರ ಸಹಕಾರವು ಅತ್ಯಗತ್ಯವಾಗಿದೆ ಎಂದರು.
 
ಕೆನರಾ ಬ್ಯಾಂಕ್ ವ್ಯವಸ್ಥಾಪಕ ಶಿವಕುಮಾರ್ ಮಾತನಾಡಿ, ಬದಲಾಗುತ್ತಿರುವ ಸಮಾಜದಲ್ಲಿ ಎಲ್ಲಾ ಪರಿಸ್ಥಿತಿಗಳಿಗೂ ಹೊಂದಿಕೊಂಡು ಜೀವಿಸುವಂತಹ ಮನಸ್ಥಿತಿಯನ್ನು ಬೆಳೆಸಿಕೊಂಡು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಕಡೆಗೆ ಪೋಷಕರು ಹೆಚ್ಚು ಗಮನಹರಿಸಬೇಕು ಎಂದರು.
 
ಶಾಲಾ ಮಕ್ಕಳಿಂದ ಅರಣ್ಯ, ಹೆಣ್ಣು ಮಕ್ಕಳ ರಕ್ಷಣೆ, ಸೇರಿದಂತೆ ವಿವಿಧ ಬಗೆಯ ಸಾಮಾಜಿಕ ಪಿಡುಗುಗಳ ಕುರಿತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿದ್ದ ಮಕ್ಕಳಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು.
 
ಮುಖ್ಯಶಿಕ್ಷಕಿ ನಿಖತ್ ಸಲ್ಮಾ, ಜೆಸಿಐ ಮಾಜಿ ಅಧ್ಯಕ್ಷ ತ್ಯಾಗರಾಜ್, ಸೈಪುಲ್ಲಾ, ಹಾಗೂ ಶಾಲಾ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.