ADVERTISEMENT

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ: ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2017, 5:12 IST
Last Updated 22 ಸೆಪ್ಟೆಂಬರ್ 2017, 5:12 IST
ಚನ್ನರಾಯಪಟ್ಟಣ ಹೋಬಳಿ ನಾಗನಾಯಕನಹಳ್ಳಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಛಲವಾದಿ ನಾರಾಯಣಸ್ವಾಮಿ ಯುವಮುಖಂಡ ಮುಖೇಶ್ ಬಾಬು ಅವರಿಗೆ ಜನ್ಮ ದಿನದ ಶುಭಹಾರೈಸಿದರು
ಚನ್ನರಾಯಪಟ್ಟಣ ಹೋಬಳಿ ನಾಗನಾಯಕನಹಳ್ಳಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಛಲವಾದಿ ನಾರಾಯಣಸ್ವಾಮಿ ಯುವಮುಖಂಡ ಮುಖೇಶ್ ಬಾಬು ಅವರಿಗೆ ಜನ್ಮ ದಿನದ ಶುಭಹಾರೈಸಿದರು   

ವಿಜಯಪುರ: ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ’ ಎಂದು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಛಲವಾದಿ ನಾರಾ ಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ನಾಗ ನಾಯಕನ ಹಳ್ಳಿಯಲ್ಲಿ ಯುವ ಮುಖಂಡ ಮುಖೇಶ್ ಬಾಬು ಅವರ ಜನ್ಮ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೇಲೆ ಜನರು ವಿಶ್ವಾಸ ಇಟ್ಟಿದ್ದಾರೆ. ಜನಪರ ಯೋಜನೆ ಸ್ವೀಕಾರ ಮಾಡಿಕೊಂಡಿದ್ದಾರೆ’ ಎಂದರು.

ADVERTISEMENT

‘ರಾಜ್ಯದಲ್ಲಿ ಆಡಳಿತ ನಡೆಸಿದ್ದ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ, ಗೊಬ್ಬರ ಕೇಳಿದ ರೈತರ ಮೇಲೆ ಗುಂಡು ಹಾರಿಸಿತ್ತು’ ಎಂದು ಅವರು ಟೀಕಿಸಿದರು.

‘ಉತ್ತರ ಪ್ರದೇಶದಲ್ಲಿ ನಡೆದ ಮ್ಯಾಜಿಕ್ ಕರ್ನಾಟಕದಲ್ಲಿ ನಡೆಯು ವುದಿಲ್ಲ, ಯಡಿಯೂರಪ್ಪ ತಮ್ಮ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಅವರಿಗೆ ಸೋಲಿನ ಭಯ ಕಾಡುತ್ತಿದೆ’ ಎಂದರು.

ಕೆಪಿಸಿಸಿ ಸದಸ್ಯ ರಾಮಚಂದ್ರಪ್ಪ ಮಾತನಾಡಿ, ‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ. ದೇವನಹಳ್ಳಿ ಕ್ಷೇತ್ರದಲ್ಲಿ ಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ’ ಎಂದರು.

ನಾಗನಾಯಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಅಕ್ಕಯ್ಯ ಮ್ಮ ಮುನಿಯಪ್ಪ, ಯುವಮುಖಂಡ ಮುಖೇಶ್ ಬಾಬು,ಡಿ.ಎಸ್.ಎಸ್ ತಾಲ್ಲೂಕು ಖಜಾಂಚಿ ರಮೇಶ್, ರಿಪಬ್ಲಿಕ್ ಸೇವೆ ಯುವ ಘಟಕದ ಅಧ್ಯಕ್ಷ ರಮೇಶ್, ನಿತಿನ್ ರೆಡ್ಡಿ, ಗ್ರಾಮ ಪಂಚಾಯಿತಿ ಸದಸ್ಯ ಮುರಳೀಧರ್, ರವಿಕಿರಣ್, ಕೆಂಪರಾಜು, ವಿಜಯಕುಮಾರ್, ಅರುಣ, ಗೋಪಿ, ಹರೀಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.