ADVERTISEMENT

ವಸ್ತುನಿಷ್ಠ ವರದಿ ಮಾಡಲು ಸಲಹೆ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2016, 7:03 IST
Last Updated 31 ಡಿಸೆಂಬರ್ 2016, 7:03 IST

ವಿಜಯಪುರ: ಪತ್ರಕರ್ತರು ವಸ್ತುನಿಷ್ಠ ವರದಿಗಳನ್ನು ಮಾಡಿ ಜನತೆಗೆ ಸತ್ಯವನ್ನು ತಿಳಿಸುವ ಮೂಲಕ ಸಮಾಜದಲ್ಲಿ ಸ್ವಾಸ್ಥ್ಯವನ್ನು ಕಾಪಾಡಬೇಕು ಎಂದು ಚಿಕ್ಕಬಳ್ಳಾಪುರ ಆದಿಚುಂಚನಗಿರಿ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ ಹೇಳಿದರು.

ಪಟ್ಟಣದ ಗಿರಿಜಾಶಂಕರ ಕಲ್ಯಾಣಮಂಟಪದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜನೆ ಮಾಡಲಾಗಿದ್ದ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವಿ.ಮಲ್ಲಿಕಾರ್ಜನಯ್ಯ ಅವರಿಗೆ ಅಭಿನಂದನೆ ಹಾಗೂ ‘ನಕ್ಷತ್ರ ಲೋಕ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ, ಶಾಸಕಾಂಗ, ಕಾರ್ಯಾಂಗ, ಮತ್ತು ನ್ಯಾಯಾಂಗಗಳು ಉತ್ತಮವಾಗಿ ತಮ್ಮ ಕಾರ್ಯನಿರ್ವಹಿಸುತ್ತಿವೆ ಎಂದರೆ ಅದಕ್ಕೆ ಮೂಲ ಕಾರಣ ಮಾಧ್ಯಮವಾಗಿದೆ ಎಂದು ತಿಳಿಸಿದರು.

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಮಲ್ಲಿಕಾರ್ಜನಯ್ಯ ಮಾತನಾಡಿದರು. ಬಿ.ವಿ.ಮಲ್ಲಿಕಾರ್ಜನಯ್ಯ ಅವರನ್ನು ಸನ್ಮಾನಿಸಲಾಯಿತು. ‘ ನಕ್ಷತ್ರ ಲೋಕ ’ ಕವನ ಸಂಕಲನವನ್ನು ಬಿಡುಗಡೆ ಮಾಡಲಾಯಿತು.

ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ ಲಕ್ಷ್ಮಣಗೌಡ, ಅಧ್ಯಕ್ಷೆ ಕುಸುಮಪರ್ವತರಾಜು, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸೊಗಡು ವೆಂಕಟೇಶ್, ಮಾಜಿ ಉಪಾಧ್ಯಕ್ಷ ಮಂಡಿಬೆಲೆ ರಾಜಣ್ಣ, ಬಮೂಲ್ ನಿರ್ದೇಶಕ ಇರಿಗೇನಹಳ್ಳಿ ಶ್ರೀನಿವಾಸ್, ಜಿ.ಪಂ.ಸದಸ್ಯ ಕೆ.ಸಿ.ಮಂಜುನಾಥ್, ಬೂದಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸಗೌಡ, ಬಿ.ಸಿ.ಪರಮಶಿವಯ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಕ್ಷೇತ್ರಾಧಿಕಾರಿ ಅಕ್ಷತಾರೈ, ಜಿಲ್ಲಾ ಪಂಚಾಯಿತಿ ಸಮನ್ವಯ ಸಮಿತಿ ಸದಸ್ಯೆ ಜ್ಯೋತಿಬಸವರಾಜ್, ಡಿ.ಕೆ. ಮಹೇಂದ್ರಕುಮಾರ್, ಪಿಳ್ಳರಾಜು, ವಿ.ಎಂ. ಕಿಶೋರ್ ಕುಮಾರ್, ಎಸ್.ಮಹೇಶ್, ವಿನಯ್, ಸತೀಶ್, ಡಿ.ಸಿ.ಶಂಕರ್, ಜಗದೀಶ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT