ADVERTISEMENT

ಸರ್ಕಾರಿ ಶಾಲೆಗಳ ಉಳಿವು: ಆತ್ಮಾವಲೋಕನ ಅಗತ್ಯ

​ಪ್ರಜಾವಾಣಿ ವಾರ್ತೆ
Published 26 ಜುಲೈ 2016, 9:52 IST
Last Updated 26 ಜುಲೈ 2016, 9:52 IST

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳ ಸಬಲೀಕರಣದ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಸರ್ಕಾರಿ ನೌಕರರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಸಾಹಿತಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯ ಹೇಳಿದರು.

ಲಯನ್ಸ್ ಕ್ಲಬ್ ವತಿಯಿಂದ ನಗರದ ಲಯನ್ಸ್ ಭವನದಲ್ಲಿ ನಡೆದ 10 ಸಾವಿರ ನೋಟ್ ಪುಸ್ತಕಗಳ ವಿತರಣೆ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಶಾಲೆಗಳನ್ನು ಉಳಿಸಲು ಸರ್ಕಾರಿ ನೌಕರರು ಬದ್ಧತೆ ಮೆರೆಯಬೇಕು. ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರು ಉತ್ತಮ ಮಟ್ಟದಲ್ಲಿ ಹೆಸರು ಮಾಡಿರುವ ಹಲವಾರು ನಿದರ್ಶನಗಳು ನಮ್ಮ ಕಣ್ಣ ಮುಂದಿವೆ ಎಂದರು.

ಜಿಲ್ಲಾ ಮಾಜಿ ಗವರ್ನರ್‌ ಕೆ.ರಮೇಶ್‌ರಾವ್ ಮಾತನಾಡಿ, ಮಕ್ಕಳಿಗೆ ಹೆಚ್ಚು ಓದುವಂತೆ ಒತ್ತಾಯಿಸುವುದು ಅವರನ್ನು ಆತ್ಮಹತ್ಯೆಗೆ ಪ್ರೇರೇಪಿಸುತ್ತಿದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವಂತಾಗಬೇಕು ಎಂದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಹುಲಿಕಲ್ ನಟರಾಜ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ 80  ಸರ್ಕಾರಿ ಶಾಲೆಯ ಮಕ್ಕಳಿಗೆ 10  ಸಾವಿರ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಪ್ರತಿಭಾನ್ವಿತ ಮಕ್ಕಳಿಗೆ ವಿದ್ಯಾರ್ಥಿ ವೇತನ ಹಾಗೂ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 125 ಕ್ಕೆ 125 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವ ಯಾಧಿಕಾರಿ ಚಂದ್ರಕಲಾ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಎಸ್.ನಟರಾಜ್, ಖಜಾಂಚಿ ಕೆ.ವಿ. ಪ್ರಭುಸ್ವಾಮಿ, ಶೈಕ್ಷಣಿಕ ಕಮಿಟಿ ಛೇರ್ಮನ್ ಸಿ.ಮುನಿರಾಜು ಲಯನೆಸ್ ಕ್ಲಬ್ ಅಧ್ಯಕ್ಷೆ ಸಿದ್ದಲಿಂಗಮ್ಮ ನಟರಾಜ್, ಕಾರ್ಯದರ್ಶಿ ಹೆಚ್.ಆರ್.ಮಂಜುಳಾ ಗುಪ್ತ, ಖಜಾಂಚಿ ಚೂಡಾಮಣಿ ನಟರಾಜ್, ಪ್ರೋಗ್ರಾಂ ಕಮಿಟಿ ಛೇರ್ಮನ್ ಎಂ.ಪಿ.ಸಿ.ವೆಂಕಟೇಶ್ ಹಾಗೂ ಲಯನ್ಸ್  ಕ್ಲಬ್, ಲಯನೆಸ್ ಕ್ಲಬ್ ಸದಸ್ಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.