ADVERTISEMENT

ಸಾಕ್ಷ್ಯಾಧಾರವಿಲ್ಲದೆ ಆರೋಪ: ಮಾನನಷ್ಟ ಮೊಕದ್ದಮೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2017, 7:04 IST
Last Updated 2 ಮಾರ್ಚ್ 2017, 7:04 IST
ದೇವನಹಳ್ಳಿ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ವಿವಿಧ ಘಟಕ ಪದಾಧಿಕಾರಿಗಳು
ದೇವನಹಳ್ಳಿ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ವಿವಿಧ ಘಟಕ ಪದಾಧಿಕಾರಿಗಳು   

ದೇವನಹಳ್ಳಿ: ಕಾಂಗ್ರೆಸ್ ನಾಯಕರ ಬಗ್ಗೆ ಯಾವುದೆ ಸಾಕ್ಷ್ಯಾಧಾರವಿಲ್ಲದೆ ಆರೋಪ ಮಾಡಿದರೆ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಬೇಕಾದೀತು ಎಂದು ಎಪಿಎಂಸಿ ಅಧ್ಯಕ್ಷೆ ಅಮರಾವತಿ ಲಕ್ಷ್ಮಿನಾರಾಯಣ ಬಿಜೆಪಿ ಮುಖಂಡರಿಗೆ ಎಚ್ಚರಿಕೆ ನೀಡಿದರು .

ದೇವನಹಳ್ಳಿ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ವತಿಯಿಂದ ನಡೆದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿ ಅವರು, ಬಿಜೆಪಿ ರಾಜ್ಯ ಮುಖಂಡರು ಈ ಹಿಂದೆ ಅಡಳಿತ ನಡೆಸಿದ ಸಂದರ್ಭದಲ್ಲಿ ಸಾಕ್ಷ್ಯಾಧಾರ ಸಮೇತ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದರೂ ಎಂಬುದಕ್ಕೆ ರಾಜ್ಯದ ಜನತೆಗೆ ಗೊತ್ತಿದೆ.

ಪ್ರಸ್ತುತ ಗ್ರಾಮಾಂತರ ಜಿಲ್ಲೆಯ ಮೂವತ್ತು ಕಿಮೀ ವ್ಯಾಪ್ತಿಯಲ್ಲಿರುವ ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ, ದೇವನಹಳ್ಳಿ ಸ್ಥಳೀಯ ಮೂವರನ್ನು ‘ಬಯಾಪ’ ಸದಸ್ಯರನ್ನಾಗಿ ನೇಮಕ ಮಾಡಿ, ಸ್ಥಳೀಯರ ಮೂಲ ಸೌಲಭ್ಯಕ್ಕೆ  ಒತ್ತು ನೀಡಲು ಅಸಕ್ತಿವಹಿಸಲಾಗಿದೆ ಇದನ್ನು ಸ್ಥಳೀಯ ಬಿಜೆಪಿ ಮುಖಂಡರು ಅರ್ಥ ಮಾಡಿಕೊಳ್ಳದೆ ವ್ಯರ್ಥ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ ಎಂದರು .

ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ಅಧ್ಯಕ್ಷ ಸೋಮಣ್ಣ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಅರಗಿಸಿಕೊಳ್ಳಲಾಗದ ಸ್ಥಳೀಯ ಬಿಜೆಪಿ ಮುಖಂಡರು ಹುರುಳಿಲ್ಲದ ಆರೋಪದಲ್ಲಿ ತೊಡಗಿದ್ದಾರೆ  ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ ಮಂಜುನಾಥ್, ಎಪಿಎಂಸಿ ನಾಮಿನಿ ನಿರ್ದೆಶಕ ರಾಜಣ್ಣ, ಬಿದಲೂರು ರಾಜಣ್ಣ, ಲಕ್ಷಣ್ ಗೌಡ, ಚೇತನ್ ಗೌಡ, ಜಯರಾಮ್, ಕಾಂಗ್ರೆಸ್ ಕಾರ್ಮಿಕ ಘಟಕ ತಾಲ್ಲೂಕು ಅಧ್ಯಕ್ಷ ಅವತಿ ವೆಂಕಟೇಶ್, ತಾಲ್ಲೂಕು ಪಂಚಾಯಿತಿ ಸದಸ್ಯ ಮುನೇಗೌಡ, ಮಂಜುನಾಥ್, ಎಪಿಎಂಸಿ ನಿರ್ದೆಶಕ ಸುಧಾಕರ್, ಖಾದಿಬೋರ್ಡ್ ಮಾಜಿ ಅಧ್ಯಕ್ಷ ಕೆ.ಪಟಾಲಪ್ಪ ಇದ್ದರು .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.