ADVERTISEMENT

ಹಕ್ಕು ಬಾಧ್ಯತೆ ಅರಿಯಲು ಮಹಿಳೆಯರಿಗೆ ಸಲಹೆ

ಜಿಲ್ಲಾ ಪಂಚಾಯಿತಿ ಸದಸ್ಯೆ ಪದ್ಮಾವತಿ ಮುನೇಗೌಡ ಅಭಿಮತ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2018, 10:03 IST
Last Updated 17 ಮಾರ್ಚ್ 2018, 10:03 IST

ದೊಡ್ಡಬಳ್ಳಾಪುರ: ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಮುನ್ನಡೆ ಸಾಧಿಸುತ್ತಿದ್ದಾರೆ. ಆದರೆ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಇನ್ನೂ ಸೂಕ್ತ ಸ್ಥಾನಮಾನ ದೊರೆತಿಲ್ಲ. ಈ ನಿಟ್ಟಿನಲ್ಲಿ ರಾಜಕೀಯದಲ್ಲಿ ಮಹಿಳೆಯರಿಗೆ ಮೀಸಲಾತಿ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಪದ್ಮಾವತಿ ಮುನೇಗೌಡ ಹೇಳಿದರು.

ನಗರದ ಜೆಡಿಎಸ್ ಕಚೇರಿಯಲ್ಲಿ ನಡೆದ ‘ಮಹಿಳಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳೆ ತನ್ನ ಸಾಮರ್ಥ್ಯವನ್ನು ಎಲ್ಲ ರಂಗಗಳಲ್ಲೂ ಪ್ರದರ್ಶಿಸುತ್ತಾಳೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ ಆಕೆಗೆ ಸಿಗುವ ಅವಕಾಶಗಳು ಕಡಿಮೆ. ಇಂದಿಗೂ ಮಹಿಳೆಯನ್ನು ಶೋಷಣೆ ಮಾಡುವುದು ನಿಂತಿಲ್ಲ. ಈ ನಿಟ್ಟಿನಲ್ಲಿ ಮಹಿಳೆಯರು ಸಂಘಟಿತರಾಗಿ ಹಕ್ಕು ಬಾಧ್ಯತೆಗಳನ್ನು ಉಳಿಸಿಕೊಳ್ಳಬೇಕು ಎಂದರು.

ADVERTISEMENT

ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ಜೆಡಿಎಸ್ ತಾಲ್ಲುಕು ಅಧ್ಯಕ್ಷ ಎಂ.ಲಕ್ಷ್ಮೀಪತಯ್ಯ, ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ದೇವರಾ
ಜಮ್ಮ, ನಗರ ಘಟಕದ ಅಧ್ಯಕ್ಷೆ  ಶಾಂತಮ್ಮ, ನಗರಸಭೆ ಸದಸ್ಯೆ ಸುಶೀಲ ರಾಘವ ಹಾಗೂ ಜೆಡಿಎಸ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.