ADVERTISEMENT

ಹೆಚ್ಚಿನ ಅನುದಾನ ಬಿಡುಗಡೆ: ಶಾಸಕ

ಗ್ರಾಮಗಳಲ್ಲಿ ಮೂಲಸೌಲಭ್ಯ ಕಲ್ಪಿಸಲು ಆದ್ಯತೆ

​ಪ್ರಜಾವಾಣಿ ವಾರ್ತೆ
Published 4 ಮೇ 2017, 9:45 IST
Last Updated 4 ಮೇ 2017, 9:45 IST

ಆನೇಕಲ್‌: ಎಲ್ಲ  ಗ್ರಾಮಗಳಲ್ಲಿ ಮೂಲಸೌಲಭ್ಯ ಕಲ್ಪಿಸಲು ಪ್ರಥಮ ಆದ್ಯತೆ ನೀಡಲಾಗಿದ್ದು ತಾಲ್ಲೂಕಿನ ಪ್ರತಿ ಗ್ರಾಮದಲ್ಲೂ ಒಳಚರಂಡಿ, ರಸ್ತೆ, ಕುಡಿಯುವ ನೀರು ಸೌಲಭ್ಯ ದೊರೆಯುವಂತೆ ಮಾಡುವ ದಿಸೆಯಲ್ಲಿ ಪ್ರಯತ್ನ ಮಾಡಲಾಗಿದ್ದು ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.

ಅವರು ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ₹ 1.2 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ವಿಶೇಷವಾಗಿ ಜನತಾ ಕಾಲೊನಿಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದ್ದು ಕಾಂಕ್ರಿಟ್ ರಸ್ತೆ, ಚರಂಡಿ ಕಾಮಗಾರಿಗಳನ್ನು ಕೈಗೊಂಡಿದ್ದು ಕಾಲೊನಿಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.

ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ಚಿನ್ನಪ್ಪ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾರಾಯಣಘಟ್ಟ, ಗೋಪಸಂದ್ರ, ಚಿಕ್ಕತಿಮ್ಮಸಂದ್ರ ಗ್ರಾಮಗಳಲ್ಲಿ ತಲಾ ₹ 15 ಲಕ್ಷಗಳ ವಿಶೇಷ ಘಟಕ ಯೋಜನೆಯ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು. ಮುತ್ತಾನಲ್ಲೂರು–ಅಳಿಬೊಮ್ಮಸಂದ್ರ ರಸ್ತೆಯು ಅತ್ಯಂತ ಹಾಳಾಗಿದ್ದು ಈ ರಸ್ತೆ ಅಭಿವೃದ್ಧಿಗಾಗಿ ₹ 80 ಲಕ್ಷ ಅನುದಾನ ಮಂಜೂರಾಗಿದ್ದು ಭೂಮಿ ಪೂಜೆ ನಡೆಸಲಾಗಿದೆ.

ಜಿಲ್ಲಾ ಪಂಚಾಯಿತಿ ಸದಸ್ಯೆ ಪವಿತ್ರಾ ಜಯಪ್ರಕಾಶ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಪುಷ್ಪ, ಪುಷ್ಪರಾಜ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶುಭಾ ಶ್ರೀಧರ್, ಸದಸ್ಯರಾದ ಸುಗುಣಮ್ಮ, ಜ್ಯೋತಿ, ಮುನಿಸ್ವಾಮಿರೆಡ್ಡಿ, ಶಿವಾನಂದರೆಡ್ಡಿ, ಕೃಷ್ಣಾರೆಡ್ಡಿ, ರಾಜರೆಡ್ಡಿ, ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಪ್ಪ, ಚಿನ್ನಪ್ಪ. ವೈ. ಚಿಕ್ಕಹಾಗಡೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.