ADVERTISEMENT

ಹೆಣ್ಣು ಮಕ್ಕಳ ಹಾಸ್ಟೆಲ್‌ಗೆ ನೀರಿನ ಕೊರತೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2017, 10:50 IST
Last Updated 8 ಜುಲೈ 2017, 10:50 IST

ವಿಜಯಪುರ: ಇಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸರಿಯಾಗಿ ನೀರಿನ ವ್ಯವಸ್ಥೆ ಯಿಲ್ಲದೆ ಇರುವ ಬಗ್ಗೆ ಭಾರತೀಯ ಮಾನವ ಹಕ್ಕುಗಳ ಜಾಗೃತಿ ವೇದಿಕೆ ತಾಲ್ಲೂಕು ಅಧ್ಯಕ್ಷ ಗಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಪುರಸಭೆ ಅಧಿಕಾ ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪೋಷಕರು ದೂರು ಕೊಟ್ಟಿರುವ ಹಿನ್ನೆಲೆಯಲ್ಲಿ ಅವರು ಭೇಟಿ ನೀಡಿದರು.

ಸರ್ಕಾರಿ ಶಾಲೆಗಳು, ವಿದ್ಯಾರ್ಥಿನಿಲ ಯಗಳಿಗೆ ಸ್ಥಳೀಯ ಸಂಸ್ಥೆಗಳು ಮೂಲ ಸೌಕರ್ಯಗಳನ್ನು ಒದಗಿಸಿಕೊಡಬೇಕು. ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಮೂರು ವರ್ಷಗಳಿಂದ ಸರಿಯಾಗಿ ನೀರಿನ ವ್ಯವಸ್ಥೆಯಿಲ್ಲ ಎಂದರು.

ವಾರ್ಡನ್ ಅವರು, ಅನೇಕ ಬಾರಿಗೆ ಪುರಸಭೆಗೆ ಅರ್ಜಿಗಳನ್ನು ಸಲ್ಲಿಸಿ ನೀರು ಪೂರೈಕೆ ಮಾಡುವಂತೆ ಕೇಳಿಕೊಂಡರೂ ಸ್ಪಂದಿಸಿಲ್ಲ, ಬಹಳಷ್ಟು ಮಂದಿ ಪೋಷ ಕರು ಬಂದು ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಮಕ್ಕಳನ್ನು ವಾಪಸ್‌ ಕರೆದು ಕೊಂಡು ಹೋಗುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲಿ ಸಲಾಯಿತು ಎಂದರು.

ADVERTISEMENT

ವಾರ್ಡನ್ ವಿಶಾಲಾಕ್ಷಿ ಮಾತನಾಡಿ, ಇಲ್ಲಿನ 25 ಮಂದಿ ಹೆಣ್ಣು ಮಕ್ಕಳಿದ್ದಾರೆ. ನಮಗೆ ನೀರಿನ ಕೊರತೆ ಬಿಟ್ಟರೆ ಬೇರೇನೂ ಸಮಸ್ಯೆಯಿಲ್ಲ, ಒಂದು ಕೊಳವೆ ಬಾವಿ ಕೊರೆ ಯಿಸಿ ಕೊಟ್ಟರೆ ಅನುಕೂಲ ವಾಗುತ್ತದೆ ಎಂದರು. ದೇವನಹಳ್ಳಿ ತಾಲ್ಲೂಕು ಉಪಾಧ್ಯಕ್ಷ ಮಲ್ಲೇಶ್, ಪದ್ಮನಾಭಯ್ಯ, ವಿಜಯಪುರ ಹೋಬಳಿ ಅಧ್ಯಕ್ಷ ಎಸ್. ಮಂಜುನಾಥ್, ಉಪಾಧ್ಯಕ್ಷ ಎಂ.ಮುನಿನಾರಾಯಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.