ADVERTISEMENT

27ರಂದು ದಲಿತರಿಂದ ದೇವಾಲಯ ಪ್ರವೇಶ

ಮೇಲಿನಜೂಗಾನಹಳ್ಳಿಯಲ್ಲಿ ದೇಗುಲ ಪ್ರವೇಶಕ್ಕೆ ಸವರ್ಣೀಯರ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2017, 7:26 IST
Last Updated 24 ಸೆಪ್ಟೆಂಬರ್ 2017, 7:26 IST
ದೊಡ್ಡಬಳ್ಳಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೆ.ಸಿದ್ದರಾಜು ಮಾತನಾಡಿದರು
ದೊಡ್ಡಬಳ್ಳಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೆ.ಸಿದ್ದರಾಜು ಮಾತನಾಡಿದರು   

ದೊಡ್ಡಬಳ್ಳಾಪುರ: ತಾಲ್ಲೂಕಿನ ಮೇಲಿನಜೂಗಾನಹಳ್ಳಿ ಗ್ರಾಮದಲ್ಲಿ ದಲಿತರು ದೇವಾಲಯದ ಒಳಗೆ ಹೋಗದಂತೆ ನಿರ್ಬಂಧಿಸಿರುವುದನ್ನು ಖಂಡಿಸಿ ಇದೇ 27ರಂದು ‘ದೇವಾಲಯ ಪ್ರವೇಶ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಶೂದ್ರಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿದ್ದರಾಜು ತಿಳಿಸಿದರು.

ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕಳೆದ ತಿಂಗಳು ಗಣಪತಿ ವಿಸರ್ಜನೆ ವೇಳೆ ದಲಿತ ಸಮುದಾಯದವರು ಗಣಪತಿಯನ್ನು ಗ್ರಾಮದ ಸವರ್ಣೀಯರು ವಿಸರ್ಜನೆ ಮಾಡುವುದಕ್ಕೂ ಮೊದಲು ವಿಸರ್ಜನೆಗೆ ಮುಂದಾಗಿದ್ದರು. ಇದನ್ನು ಖಂಡಿಸಿ ದಲಿತ ಯುವಕರು ಹಾಗೂ ಮಹಿಳೆಯರಿಗೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಲಾಗಿದೆ’ ಎಂದು ದೂರಿದರು.

‘ಇದಲ್ಲದೆ ಜೀವ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ ಒಂದು ತಿಂಗಳಾದರೂ ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲ’ ಎಂದರು.

ADVERTISEMENT

ಗ್ರಾಮದ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮದ್ದೂರಮ್ಮ ದೇವಾಲಯದಲ್ಲಿ ಶತಮಾನಗಳಿಂದಲೂ ದಲಿತರೇ ಪೂಜೆ ನೇತೃತ್ವ ವಹಿಸಿದ್ದರು.ದಲಿತರ ಮೇಲಿನ ದೌರ್ಜನ್ಯದ ವಿರುದ್ಧ ಠಾಣೆಯಲ್ಲಿ ದೂರು ದಾಖಲಾದ ನಂತರ ಮದ್ದೂರಮ್ಮ ದೇವಾಲಯದಲ್ಲೂ ಪೂಜೆ ಸಲ್ಲಿಸಲು ಅಡ್ಡಿಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಮೇಲಿನಜೂಗಾನಹಳ್ಳಿ, ಅಕ್ಕಪಕ್ಕದ ಗ್ರಾಮಗಳಲ್ಲೂ ದಲಿತರಿಗೆ ಕ್ಷೌರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ದೂರಿದರು.

**

ದೊಡ್ಡಬಳ್ಳಾಪುರ: ತಾಲ್ಲೂಕಿನ ಮೇಲಿನಜೂಗಾನಹಳ್ಳಿ ಗ್ರಾಮದಲ್ಲಿ ದಲಿತರು ದೇವಾಲಯದ ಒಳಗೆ ಹೋಗದಂತೆ ನಿರ್ಬಂಧಿಸಿರುವುದನ್ನು ಖಂಡಿಸಿ ಇದೇ 27 ರಂದು ದೇವಾಲಯ ಪ್ರವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಶೂದ್ರಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿದ್ದರಾಜು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.