ADVERTISEMENT

30ಕ್ಕೆ ದೇವಾಲಯ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2015, 20:33 IST
Last Updated 26 ಏಪ್ರಿಲ್ 2015, 20:33 IST

ದೊಡ್ಡಬಳ್ಳಾಪುರ: ತಾಲ್ಲೂಕಿನ ದರ್ಗಾಜೋಗಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಪರ್ವತ ಮಲ್ಲೇಶ್ವರಸ್ವಾಮಿ ದೇವಾಲಯವನ್ನು ಏ.30 ರಂದು ಬೆಳಿಗ್ಗೆ 11ಕ್ಕೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಸಂಸತ್‌ ಸದಸ್ಯೆ ಶೋಭಕರಂದ್ಲಾಜೆ, ಶಾಸಕ ಎಸ್‌.ಆರ್‌. ವಿಶ್ವನಾಥ್‌, ಟಿ. ವೆಂಕಟರಮಣಯ್ಯ, ನಗರಸಭೆ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.