ADVERTISEMENT

ಪ್ರಧಾನಿ ಕಾರ್ಯವೈಖರಿಗೆ ಮೆಚ್ಚಿ ಬಿಜೆಪಿಗೆ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2018, 6:46 IST
Last Updated 15 ಜನವರಿ 2018, 6:46 IST
ವಿಜಯಪುರದ ಪ್ರವಾಸಿಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಸಭೆಯಲ್ಲಿ ಯುವಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು
ವಿಜಯಪುರದ ಪ್ರವಾಸಿಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಸಭೆಯಲ್ಲಿ ಯುವಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು   

ವಿಜಯಪುರ: ದೇಶದಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಕಾರ್ಯವೈಖರಿ ಮೆಚ್ಚಿಕೊಂಡಿರುವ ಯುವಜನರು ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಯಾಗುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಡಿ.ಆರ್.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ಇಲ್ಲಿನ ಪ್ರವಾಸಿಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಜನರು ಕ್ಷೇಮವಾಗಿ ಜೀವನ ಸಾಗಿಸಬೇಕಾದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು. ಕ್ಷೇತ್ರದಲ್ಲಿ ಯುವ ಜನರು ಪಕ್ಷ ಸಂಘಟನೆಗೆ ಆಸಕ್ತಿ ವಹಿಸಬೇಕು ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ರಾಜಣ್ಣ ಮಾತನಾಡಿ, ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ಕಾರ್ಯವನ್ನು ಬಿಜೆಪಿ ಪಕ್ಷ ಮಾಡುತ್ತಿದೆ ಎಂದರು.

ADVERTISEMENT

ರಾಜ್ಯ ಸರ್ಕಾರದ ದುರಾಡಳಿತ ಮತ್ತು  ಜೆಡಿಎಸ್ ಪಕ್ಷದ ಕುಟುಂಬ ರಾಜಕಾರಣದಿಂದ ಬೇಸತ್ತಿರುವ ಜನತೆ ಈ ಬಾರಿ ಬಿಜೆಪಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಆಶ್ವಾಸನೆ ವ್ಯಕ್ತಪಡಿಸಿದರು.

ರಾಜ್ಯ ಎಸ್.ಸಿ.ಘಟಕದ ಅಧ್ಯಕ್ಷ ಕೆ.ನಾಗೇಶ್, ಜಿಲ್ಲಾ ಘಟಕದ ಉಪಾಧ್ಯಕ್ಷ ರವಿಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜಗೌಡ, ತಾಲ್ಲೂಕು ಘಟಕದ ರೈತ ಮೋರ್ಚಾ ಉಪಾಧ್ಯಕ್ಷ ಗೋಕರೆ ಗೋಪಾಲ್, ಎನ್.ರಾಜಗೋಪಾಲ್, ನಗರ ಘಟಕದ ಅಧ್ಯಕ್ಷ ಚ.ವಿಜಯಬಾಬು, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಬಿ.ಎಸ್.ಎನ್.ಎಲ್. ನಾಮಿನಿ ನಿರ್ದೇಶಕ ಕನಕರಾಜು, ನಟರಾಜು, ಮಾಚಪ್ಪ, ತಾಲ್ಲೂಕು ಘಟಕದ ಉಪಾಧ್ಯಕ್ಷ ವೆಂಕಟೇಶ್ ಪ್ರಭು, ನಗರ ಘಟಕದ ಅಧ್ಯಕ್ಷ ರಾಘವ, ದೇವರಾಜಪ್ಪ, ಪ್ರಭಾಕರ್, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಸಿ.ಸುಜಯ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.