ADVERTISEMENT

ಸಚಿವ ಅನಂತಕುಮಾರ ಹೆಗಡೆ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2018, 9:08 IST
Last Updated 23 ಜನವರಿ 2018, 9:08 IST

ದೊಡ್ಡಬಳ್ಳಾಪುರ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸಂವಿಧಾನ ಬದಲಾವಣೆ ಸೇರಿದಂತೆ ಇತ್ತೀಗೆ ನೀಡುತ್ತಿರುವ ಹೇಳಿಕೆಗಳನ್ನು ಖಂಡಿಸಿ ಸೋಮವಾರ ಪ್ರಜಾ ವಿಮೋಚನ ಚಳವಳಿ (ಸ್ವಾಭಿಮಾನ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪಿವಿಸಿ (ಎಸ್‌) ರಾಜ್ಯ ಘಟಕದ ಅಧ್ಯಕ್ಷ ಮುನಿಆಂಜಿನಪ್ಪ ಮಾತನಾಡಿ, ವಿಶ್ವದಲ್ಲೇ ವಿಶೇಷ ಸ್ಥಾನ ವನ್ನು ಹೊಂದಿರುವ ಭಾರತದ ಸಂವಿಧಾನವನ್ನು ಮನುವಾದಿಗಳು ತಮ್ಮ ಸ್ವಾರ್ಥಕ್ಕೆ ತಕ್ಕಂತೆ ಬದಲಾಯಿಸುವುದಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

ಎಲ್ಲ ಜಾತಿ, ಧರ್ಮವನ್ನು ಸಮಾನವಾಗಿ ಕಾಣುವ ಹಾಗೂ ತುಳಿತಕ್ಕೆ ಒಳಗಾದವರಿಗೆ ವಿಶೇಷ ಸ್ಥಾನವನ್ನು ಕಲ್ಪಿಸುವ ನಿಟ್ಟಿನಲ್ಲಿ ಅಂಬೇಡ್ಕರ್‌ ಭಾರತದ ಸಂವಿಧಾನವನ್ನು ಸಿದ್ಧಪಡಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.

ADVERTISEMENT

ಸಚಿವರು ಇದೇ ರೀತಿ ಮಾತು ಮುಂದುವರಿಸಿದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು. ಸಂಘಟನೆಯ ವಿಭಾಗೀಯ ಅಧ್ಯಕ್ಷ ಮುನಿಕೃಷ್ಣಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಅಯೂಬ್‌ ಖಾನ್‌, ತಾಲ್ಲೂಕು ಘಟಕದ ಅಧ್ಯಕ್ಷ ಚಿನ್ನಮರಿಯಪ್ಪ, ಜಿಲ್ಲಾ ಕಾರ್ಯದರ್ಶಿ ಗೂಳ್ಯಹನುಮಣ್ಣ, ಮುನಿರಾಜು, ಆಟೊ ಘಟಕದ ಅಧ್ಯಕ್ಷ ಅದಿಲ್‌ ಪಾಷ, ಕಸಬಾ ಹೋಬಳಿ ಅಧ್ಯಕ್ಷ ಜಿ.ರಮೇಶ್‌, ವೆಂಕಟೇಶ್‌, ಆರ್‌.ರತ್ನಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.