ADVERTISEMENT

ಚಿಕ್ಕೋಡಿ: ಉಕ್ಕೇರಿದ ಕೃಷ್ಣಾ, ಉಪನದಿಗಳು

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ವ್ಯಾಪಕ ಮಳೆ: ಮೈದುಂಬಿದ ವೇದಾ, ದೂಧಗಂಗಾ, ಪಂಚಗಂಗಾ

​ಪ್ರಜಾವಾಣಿ ವಾರ್ತೆ
Published 20 ಜುಲೈ 2017, 11:55 IST
Last Updated 20 ಜುಲೈ 2017, 11:55 IST

ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳ ಕೃಷ್ಣಾ ಮತ್ತು ಉಪನದಿಗಳ ಜಲಾನಯನ ಪ್ರದೇಶಗಳಲ್ಲಿ ಕಳೆದೆರೆಡು ದಿನಗಳಿಂದ ಸುರಿಯುತ್ತಿರುವ ‘ಮಹಾ’ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಕಳೆದ 2 ಗಂಟೆಗಳಲ್ಲಿ ಕೃಷ್ಣಾ ಮತ್ತು ಉಪನದಿಗಳ ನೀರಿನ ಹರಿವಿನಲ್ಲಿ ಹೆಚ್ಚಳ ಉಂಟಾಗಿದ್ದು, ಬುಧವಾರ ತಾಲ್ಲೂಕಿನ ಕಲ್ಲೋಳ– ಯಡೂರ ಮತ್ತು ಕಾರದಗಾ ಭೋಜ ಗ್ರಾಮಗಳ ಮಧ್ಯೆ ನಿರ್ಮಿಸಿರುವ ಸೇತುವೆಗಳು ಜಲಾವೃತಗೊಂಡಿವೆ.

ತಾಲ್ಲೂಕಿನಲ್ಲಿ ಕಳೆದೊಂದು ದಿನದಿಂದ ಜಿಟಿ ಜಟಿ ಮಳೆಯಾಗುತ್ತಿದೆ. ಆದರೆ, ಯಾವುದೇ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿಲ್ಲ. ಆದರೂ, ಮಹಾರಾಷ್ಟ್ರದ ನದಿ ಜಲಾನಯನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮವಾಗಿ ತಾಲ್ಲೂಕಿನಲ್ಲಿ ಕೃಷ್ಣಾ ಮತ್ತು ಉಪನದಿ ಗಳಾದ ದೂಧ ಗಂಗಾ, ವೇದಗಂಗಾ, ಪಂಚಗಂಗಾ ಹಾಗೂ ಚಿಕುತ್ರಾ ನದಿಗಳ ನೀರಿನ ಹರಿವಿನಲ್ಲಿ ಹೆಚ್ಚಳ ಉಂಟಾಗಿದೆ.

ಸೋಮವಾರ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ ಹರಿದು ಬರುತ್ತಿದ್ದ 30 ಸಾವಿರ ಕ್ಯುಸೆಕ್‌ ನೀರಿನ ಹರಿವಿನ ಪ್ರಮಾಣ ಬುಧವಾರ 50,226 ಕ್ಯುಸೆಕ್‌ಗೆ ಹೆಚ್ಚಿದೆ.

ADVERTISEMENT

ಜಾಪುರ ಬ್ಯಾರೇಜ್‌ನಿಂದ ಹರಿದು ಬರುವ ನೀರು ಸೇರಿದಂತೆ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಯಲ್ಲಿ  62 ಸಾವಿರ ಕ್ಯುಸೆಕ್‌ಗೂ ಹೆಚ್ಚಿನ ಪ್ರಮಾಣ ದಲ್ಲಿ ನೀರು ಹರಿಯುತ್ತಿದ್ದು, ಬುಧವಾರ ಕಲ್ಲೋಳ–ಯಡೂರ ಗ್ರಾಮಗಳ ಮಧ್ಯೆ ಕೃಷ್ಣಾ ನದಿಗೆ ನಿರ್ಮಿಸಿರುವ ಸೇತುವೆ ಹಾಗೂ ಕಾರದಗಾ–ಭೋಜ ಗ್ರಾಮಗಳ ಮಧ್ಯೆ ದೂಧಗಂಗಾ ನದಿಗೆ ನಿರ್ಮಿಸಿ ರುವ ಸೇತುವೆ ಜಲಾವೃತಗೊಂಡಿವೆ.

ದಗಂಂಗಾ ನದಿಗೆ ನಿರ್ಮಿಸಿರುವ ಭೋಜವಾಡಿ–ಕುನ್ನೂರ ಗ್ರಾಮಗಳ ಮಧ್ಯೆದ ಸೇತುವೆ ಮತ್ತು ಬಾರವಾಡ–ಕುನ್ನೂರ ಗ್ರಾಮಗಳ ಮಧ್ಯೆದಲ್ಲಿರುವ ಸೇತುವೆಗಳೂ ಮುಳುಗಡೆಯ ಅಂಚಿನಲ್ಲಿವೆ.

ಳುಗಡೆಯಾಗಿರುವ ಸೇತುವೆ ಮೇಲಿದ್ದ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದ್ದು, ಕೆಳಮಟ್ಟದ ಸೇತುವೆಗಳ ಬಳಿಯೂ ಪೋಲಿಸ್‌ ಬಂದೋಬಸ್ತ್‌ ನಿಯೋಜಿಸಲಾಗಿದೆ ಎಂದು ತಹಶೀಲ್ದಾರ್ ಸಿ.ಎಸ್‌.ಕುಲಕರ್ಣಿ ತಿಳಿಸಿದ್ದಾರೆ.

‘ಚಿಕ್ಕೋಡಿ ತಾಲ್ಲೂಕು ಸೇರಿದಂತೆ ಉಪವಿಭಾಗ ವ್ಯಾಪ್ತಿಯಲ್ಲಿ ಸಂಭವ ನೀಯ ನೆರೆ ಹಾವಳಿಯನ್ನು ನಿಯಂತ್ರಿಸು ವಲ್ಲಿ ಎಲ್ಲ ರೀತಿಯ ಅಗತ್ಯ ಮುಂಜಾ ಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.   ನೆರೆ ಪರಿಸ್ಥಿತಿಯ ಕುರಿತು ನಿಗಾವಹಿಸಲು ನೊಡೆಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಗತ್ಯವಿದ್ದಲ್ಲಿ ಸಂತ್ರಸ್ತರ ಸ್ಥಳಾಂತರ ಮತ್ತು ಗಂಜಿ ಕೇಂದ್ರಗಳನ್ನು ತೆರೆಯಲು ಸ್ಥಳಗಳನ್ನು ಗುರುತಿಸಲಾಗಿದೆ’ ಎಂದು ಉಪವಿಭಾಗಾಧಿಕಾರಿ ಗೀತಾ ಕೌಲಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.