ADVERTISEMENT

ಚಿಕ್ಕೋಡಿ ಜಿಲ್ಲೆ ಮಾಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2017, 6:27 IST
Last Updated 25 ನವೆಂಬರ್ 2017, 6:27 IST

ಚಿಕ್ಕೋಡಿ:  ‘ರಾಜ್ಯದಲ್ಲಿ ಹೊಸ ದಾಗಿ ರಚಿತಗೊಂಡಿರುವ ನೂತನ ತಾಲ್ಲೂಕುಗಳು ಜನವರಿ 1ರಂದು ಆರಂಭಗೊಳ್ಳಲಿವೆ. ಅದೇ ದಿನ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕು. ಇಲ್ಲವಾದರೆ ಜ. 26ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು’ ಎಂದು ಕಾಂಗ್ರೆಸ್‌ ಮುಖಂಡ ಬಿ.ಆರ್. ಸಂಗಪ್ಪಗೋಳ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂಬುದು ಈ ಭಾಗದ ಜನರ ಎರಡು ದಶಕಗಳ ಬೇಡಿಕೆಯಾಗಿದೆ. ಅಧಿಕಾರ ವಿಕೇಂದ್ರಿಕರಣದ ಮೂಲಕ ಗಡಿಭಾಗದ ಸಮಗ್ರ ಅಭಿವೃದ್ಧಿಗೆ ಚಿಕ್ಕೋಡಿ ಜಿಲ್ಲೆಯ ರಚನೆ ಅಗತ್ಯವಾಗಿದೆ. ಈ ಕುರಿತು ಹೋರಾಟಗಳೂ ನಡೆದಿದೆ’ ಎಂದರು.

‘ಎರಡು ದಿನಗಳ ಹಿಂದೆ ಚಿಕ್ಕೋಡಿಯಲ್ಲಿ ನಡೆದ ಜಿಟಿಟಿಸಿ ಕಾಲೇಜು ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ಸಚಿವ ಎಂ.ಬಿ.ಪಾಟೀಲ ಮತ್ತು ಸಂಸದ ಪ್ರಕಾಶ ಹುಕ್ಕೇರಿ ಅವರೂ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿರುವದು ಅಭಿನಂದನಾರ್ಹ. ಆದರೆ, ಇದು ಕೇವಲ ಚುನಾವಣೆ ಗಿಮಿಕ್ಸ್‌ ಆಗದೇ ಮಾತಿನಂತೆ ನಡೆದುಕೊಳ್ಳಬೇಕು’ ಎಂದು ಸಂಗಪ್ಪಗೋಳ ಒತ್ತಾಯಿಸಿದ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.