ADVERTISEMENT

‘ಜನಸಂಖ್ಯೆ ಹೆಚ್ಚಳದಿಂದ ಘೋರ ಸಮಸ್ಯೆ’

​ಪ್ರಜಾವಾಣಿ ವಾರ್ತೆ
Published 12 ಜುಲೈ 2017, 6:11 IST
Last Updated 12 ಜುಲೈ 2017, 6:11 IST

ಬೆಳಗಾವಿ: ವಿಶ್ವದಲ್ಲಿ ಜನಸಂಖ್ಯೆ ತೀವ್ರ ವಾಗಿ ಹೆಚ್ಚಳವಾಗುತ್ತಿರುವುದನ್ನು ಅತ್ಯಂತ ಘೋರ ಸಮಸ್ಯೆ ಎಂದು ಪರಿಗಣಿಸಲಾಗುತ್ತಿದೆ ಎಂದು ಸಂಸದ ಸುರೇಶ ಅಂಗಡಿ ಹೇಳಿದರು.

ಇಲ್ಲಿನ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ(ಬಿಮ್ಸ್‌)ಯಲ್ಲಿ ಜಿಲ್ಲಾಡ ಳಿತ, ಜಿಲ್ಲಾ ಪಂಚಾಯ್ತಿ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ವಿಶ್ವದ ಜನಸಂಖ್ಯೆ 200 ವರ್ಷಗಳಲ್ಲಿ ಹಲವು ಪಟ್ಟು ಹೆಚ್ಚಾಗಿದೆ. ಆದರೆ, ಆಹಾರ ಉತ್ಪಾದನೆ ಇದಕ್ಕೆ ಅನುಗುಣವಾಗಿ ಹೆಚ್ಚಾಗಿಲ್ಲ. ಇದು ಮುಂದಿನ ದಿನಗಳಲ್ಲಿ ದೊಡ್ಡ ಪರಿಣಾಮ ಉಂಟು ಮಾಡಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

‘ಜನಸಂಖ್ಯೆ ನಿಯಂತ್ರಣಕ್ಕೆ ಸರ್ಕಾ ರವು ಎಲ್ಲ ಪ್ರಯತ್ನಗಳನ್ನೂ ಮಾಡು ತ್ತಿದೆ. ಜನಸಂಖ್ಯೆ ಹೆಚ್ಚಿದ್ದರಿಂದ ನಿರು ದ್ಯೋಗ, ಆಹಾರ, ಶಿಕ್ಷಣ, ವಸತಿ ಸಮಸ್ಯೆಗಳು ಉಂಟಾಗುತ್ತವೆ. ಸಣ್ಣ ವಯಸ್ಸಿನಲ್ಲಿಯೇ ವಿವಾಹ ಮಾಡು ವುದು, ಜನರಿಗೆ ಸೂಕ್ತ ಶಿಕ್ಷಣ ಇಲ್ಲದಿರುವುದು ಜನಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಫಿರೋಜ್‌ ಸೇಠ್‌, ‘ಸಾರ್ವಜನಿಕರಿಗೆ ಶಿಕ್ಷಣ ನೀಡುವುದು ಅತಿ ಅವಶ್ಯವಾಗಿದೆ. ಸರ್ಕಾರದ ಎಲ್ಲ ಯೋಜನೆಗಳ ಲಾಭ ಜನಸಾಮಾನ್ಯರಿಗೆ ತಲುಪಬೇಕಾದರೆ ಜನಸಂಖ್ಯೆ ತಡೆಗಟ್ಟುವುದು ಮಹತ್ವದ್ದಾಗಿದೆ’ ಎಂದು ಹೇಳಿದರು.

ಅಭಿನಂದನಾ ಪತ್ರ ವಿತರಣೆ: 2016-–17ನೇ ಸಾಲಿನಲ್ಲಿ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ಸಾಧನೆ ಮಾಡಿದ ಡಾ.ಆರ್.ಎಸ್ ಬೆಣಚಿನಮರ್ಡಿ (ಮುಖ್ಯ ವೈದ್ಯಾಧಿಕಾರಿ, ಸಾರ್ವಜನಿಕ ಆಸ್ಪತ್ರೆ, ಗೋಕಾಕ), ಡಾ.ಅಶೋಕ ಜೀರಗ್ಯಾಳ (ಸ್ತ್ರೀರೋಗ ತಜ್ಞ, ಸಾರ್ವ ಜನಿಕ ಆಸ್ಪತ್ರೆ, ಸವದತ್ತಿ), ಡಾ.ಅನುಶ್ರೀ ಮಾನೆ (ಸ್ತ್ರೀರೋಗ ತಜ್ಞ, ಬಿಮ್ಸ್‌), ಡಾ.ಎಸ್.ಎಸ್ ಸಾಯನ್ನವರ (ವೈದ್ಯಾಧಿ ಕಾರಿ, ಪ್ರಾ.ಆ. ಕೇಂದ್ರ, ಪಾಶ್ಚಾಪುರ), ಡಾ.ಪ್ರತಾಪಸಿಂಗ ರಜಪೂತ (ವೈದ್ಯಾಧಿ ಕಾರಿ, ಪ್ರಾ.ಆ. ಕೇಂದ್ರ, ಸಂಗೊಳ್ಳಿ, ಸೀಮಾ ಜಾಧವ, ಶುಶ್ರೂಷಕಿ, ಬಿಮ್ಸ್), ಜೈಬುನಬಿ ಮುಲ್ತಾನಿ (ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಪ್ರಾ.ಆ. ಕೇಂದ್ರ, ಕಣಗಲಾ), ಲಕ್ಕವ್ವಾ ಮರಕುಂಬಿ (ಆಶಾ ಕಾರ್ಯಕರ್ತೆ, ಪ್ರಾ.ಆ. ಕೇಂದ್ರ, ಬಳೋಬಾಳ) ಅವರಿಗೆ ಅಭಿನಂದನಾ ಪತ್ರ ನೀಡಿ ಸತ್ಕರಿಸಲಾಯಿತು. 

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾ ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಪ್ರಾಂಶುಪಾಲೆ ಡಾ. ಸರೋಜಾ ತಿಗಡಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಚಾಂದನಿ ದೇವಡಿ, ಬಿಮ್ಸ್‌ ನಿರ್ದೇಶಕ ಡಾ.ಎಸ್‌. ಟಿ.ಕಳಸದ, ವೈದ್ಯಕೀಯ ಅಧೀಕ್ಷಕ ಡಾ.ವಿನಯ್‌ ದಾಸ್ತಿಕೊಪ್ಪ ಇದ್ದರು. ನಿವೃತ್ತ ಪ್ರಾಧ್ಯಾಪಕರಾದ ಡಾ.ರಂಜನಾ ಗೋದಿ ಜನಸಂಖ್ಯೆ ಹೆಚ್ಚಳ ಕುರಿತು ಉಪನ್ಯಾಸ ನೀಡಿದರು.

ಮಹೇಶ್ವರಿ ಅಂಧ ಮಕ್ಕಳ ಶಾಲೆ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಸ್ವಾಗತಿಸಿದರು. ಸಿ.ಜಿ. ಅಗ್ನಿಹೋತ್ರಿ ಕಾರ್ಯಕ್ರಮ ನಿರೂಪಿಸಿದರು. ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಪಿ. ಯಲಿಗಾರ ನಿರ್ವಹಿಸಿದರು. ಬೈಲ ಹೊಂಗಲ ತಾಲ್ಲೂಕು ಆರೋಗ್ಯಾಧಿಕಾರಿ ಎಸ್.ಎಸ್. ಸಿದ್ದನ್ನವರ ವಂದಿಸಿದರು.

ಗಮನಸೆಳೆದ ಜಾಥಾ: ಇದಕ್ಕೂ ಮುನ್ನ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಿಮ್ಸ್‌, ನೆಹರೂ ಯುವ ಕೇಂದ್ರ, ಶಿಕ್ಷಣ ಇಲಾಖೆ, ವಾರ್ತಾ ಇಲಾಖೆ, ಮಹಾನಗರಪಾಲಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರತೇಶ ಶಿಕ್ಷಣ ಸಂಸ್ಥೆ, ಭಾರತೀಯ ಕುಟುಂಬ ಕಲ್ಯಾಣ ಸಂಘ, ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ಕೆಡೆಟ್‌ಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಜಾಗೃತಿ ಜಾಥಾ ಗಮನಸೆಳೆಯಿತು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಂಸದರು ಚಾಲನೆ ನೀಡಿದರು. ಬೀರಲಿಂಗೇಶ್ವರ ಡೊಳ್ಳುಕುಣಿತ ತಂಡ ಆಕರ್ಷಿಸಿತು. ಬೀದಿನಾಟಕ ಪ್ರದರ್ಶಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.