ADVERTISEMENT

‘ಟಿಕೆಟ್‌: ಹೈಕಮಾಂಡ್‌ ತೀರ್ಮಾನ ಅಂತಿಮ’

​ಪ್ರಜಾವಾಣಿ ವಾರ್ತೆ
Published 19 ಮೇ 2017, 7:02 IST
Last Updated 19 ಮೇ 2017, 7:02 IST

ಬೆಳಗಾವಿ: ‘ಟಿಕೆಟ್‌ ಹಂಚಿಕೆ ಬಗ್ಗೆ ವರಿಷ್ಠರ ತೀರ್ಮಾನವೇ ಅಂತಿಮ’ ಎಂದು ಸಣ್ಣ ಕೈಗಾರಿಕಾ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ಪ್ರವಾಸಿಮಂದಿರದಲ್ಲಿ ಗುರು ವಾರ ಸಾರ್ವಜನಿಕರ ಕುಂದುಕೊರತೆ ಆಲಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಸಮುದ್ರವಿದ್ದಂತೆ. ಇದು ಯಾರ ಮೇಲೂ ನಿಂತಿಲ್ಲ. ಯಾರೂ ಅನಿವಾರ್ಯರಲ್ಲ. ಮುಖಂಡರ ನಡುವೆ ಭಿನ್ನಾಭಿಪ್ರಾಯ ವಿದ್ದರೆ ವರಿಷ್ಠರು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ’ ಎಂದು ತಿಳಿಸಿದರು.

‘ಯಮಕನಮರಡಿ ಕ್ಷೇತ್ರದಲ್ಲಿ ಸಹೋದರ ಲಖನ್‌ ಜಾರಕಿಹೊಳಿಗೆ ಟಿಕೆಟ್‌ ನೀಡಲಾಗುವುದು ಎಂದು ನನ್ನ ವೈಯಕ್ತಿಕ ಅಭಿಪ್ರಾಯ ಹೇಳಿದ್ದೇನೆ. ಯಾರಿಗೆ ಟಿಕೆಟ್‌ ಕೊಡಬೇಕು ಎನ್ನುವು ದನ್ನು ವರಿಷ್ಠರು ನಿರ್ಧರಿಸುತ್ತಾರೆ. 30 ವರ್ಷಗಳಿಂದ ಸಾಮಾನ್ಯ ಕಾರ್ಯಕರ್ತ ನಾಗಿ ಪಕ್ಷಕ್ಕೆ ದುಡಿದಿದ್ದೇನೆ. ಜನರು ಸಮಾಜಸೇವೆಗೆ ಅವಕಾಶ ಕಲ್ಪಿಸಿದ್ದಾರೆ. ಇದನ್ನು ಸದುಪಯೋಗಪಡಿಸಿಕೊಳ್ಳು ತ್ತೇನೆ’ ಎಂದರು.

‘ಮುಂದಿನ ವಿಧಾನಸಭೆ ಚುನಾವಣೆ ಬಳಿಕ ದೇಶದಾದ್ಯಂತ ಕಾಂಗ್ರೆಸ್ ಗಾಳಿ ಬೀಸಲಿದೆ. ಅಧಿಕಾರಕ್ಕೆ ಬರುತ್ತೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಹಗಲುಗನಸು ಕಾಣುತ್ತಿದ್ದಾರೆ’ ಎಂದು ಟೀಕಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.