ADVERTISEMENT

ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2017, 6:58 IST
Last Updated 29 ನವೆಂಬರ್ 2017, 6:58 IST

ಅಕ್ಕಿಆಲೂರ: ಶಾಡಗುಪ್ಪಿ ಗ್ರಾಮ ದಲ್ಲಿ ಆರ್ಥಿಕ ಸಮಸ್ಯೆಯಿಂದ ಸ್ಥಗಿತ ಗೊಂಡಿರುವ ಮಾಲತೇಶ ದೇವ ಸ್ಥಾನದ ಜೀರ್ಣೋದ್ಧಾರಕ್ಕಾಗಿ ಹುಬ್ಬಳ್ಳಿಯ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸ್ವತಃ ಪಾದಯಾತ್ರೆ ಮೂಲಕ ಮನೆ, ಮನೆಗೆ ತೆರಳಿ ವಂತಿಗೆ ಸಂಗ್ರಹಿಸುತ್ತಿದ್ದಾರೆ.

ಪ್ರತಿಯೊಂದು ಮನೆಗಳಿಗೂ ತೆರಳುತ್ತಿರುವ ಸ್ವಾಮೀಜಿ ಅಲ್ಲಿ ಪಾದಪೂಜೆ ಸ್ವೀಕರಿಸಿ ಜೀರ್ಣೋ ದ್ಧಾರಕ್ಕೆ ಅಗತ್ಯ ವಂತಿಗೆ ನೀಡುವಂತೆ ಭಕ್ತರಲ್ಲಿ ಕೋರುತ್ತಿದ್ದಾರೆ. ಕಳೆದ 3 ದಿನಗಳಿಂದ ಸ್ವಾಮೀಜಿ ಪಾದಯಾತ್ರೆ ನಡೆಸುತ್ತಿದ್ದಾರೆ.

* * 

ADVERTISEMENT

ಚಾರಿತ್ರ್ಯ ನಿರ್ಮಾಣದಲ್ಲಿ ದೇವಸ್ಥಾನಗಳು ಮುಖ್ಯ ಪಾತ್ರ ವಹಿಸುತ್ತವೆ. ಸಮಾಜಕ್ಕೆ ದೇವಸ್ಥಾನ ಕೇಂದ್ರ ಸ್ಥಾನ. ಅವುಗಳ ಜೀರ್ಣೋದ್ಧಾರ ನಮ್ಮೆಲ್ಲರ ಹೊಣೆ
ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ
ಮೂರುಸಾವಿರ ಮಠ, ಹುಬ್ಬಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.