ADVERTISEMENT

ರೈತರ ಬೇಡಿಕೆ ಈಡೇರಿಕೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2017, 5:59 IST
Last Updated 2 ಫೆಬ್ರುವರಿ 2017, 5:59 IST
ರೈತರ ಬೇಡಿಕೆ ಈಡೇರಿಕೆಗೆ ಆಗ್ರಹ
ರೈತರ ಬೇಡಿಕೆ ಈಡೇರಿಕೆಗೆ ಆಗ್ರಹ   

ಖಾನಾಪುರ: ತಾಲ್ಲೂಕಿನ ರೈತಾಪಿ ವರ್ಗದ ಮಹತ್ವದ ಸಮಸ್ಯೆಗಳ ತ್ವರಿತ ಇತ್ಯರ್ಥಕ್ಕೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ ಮತ್ತು ಹಸಿರುಸೇನೆಯ ಪದಾಧಿ ಕಾರಿಗಳು ಸೋಮವಾರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್‌ ಮೂಲಕ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ರೈತರ ಪಂಪ್‌ಸೆಟ್‌ಗಳಿಗೆ ನಿಯಮಿತ ವಿದ್ಯುತ್ ಸರಬರಾಜು ಮಾಡುವುದು.  ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವುದು, ರೈತರ ಹೊಲಕ್ಕೆ ವಿದ್ಯುತ್ ಸರಬರಾಜು ಮಾಡುವ ವಿದ್ಯುತ್‌ ಪರಿವರ್ತಕಗಳನ್ನು ನಿಗದಿತ ಅವಧಿಯ ಒಳಗೆ ದುರಸ್ತಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಹೊಲಗಳ ಪಂಪ್ ಸೆಟ್ ಟಿ.ಸಿ ಕೂಡಲೇ ದುರಸ್ತಿ ಕೈಗೊಳ್ಳುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಕೃಷಿಕ ಸಮಾಜದ ಜಿಲ್ಲಾ ಘಟಕ ಅಧ್ಯಕ್ಷ ಅಶೋಕ ಯಮಕನಮರಡಿ ಆಗ್ರಹಿಸಿದರು.

ಕೃಷಿಕ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಗುರುಲಿಂಗಯ್ಯ ಪೂಜಾರ, ವಾಸು ತಿಪ್ಪಣ್ಣವರ, ಗಂಗಪ್ಪ ಹೇರೆಕರ, ಯಲ್ಲಪ್ಪ ಚನ್ನಾಪುರಿ, ಬಸವರಾಜ ಮುಗಳಿಹಾಳ, ರಮಾನಂದ ಅಂಬಡಗಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.