ADVERTISEMENT

ವಿದ್ಯಾರ್ಥಿ ಅನುಮಾನಾಸ್ಪದ ಸಾವು; ಕುಟುಂಬದವರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2017, 5:07 IST
Last Updated 11 ನವೆಂಬರ್ 2017, 5:07 IST

ಗೋಕಾಕ: ತಾಲ್ಲೂಕಿನ ಮೂಡಲಗಿ ಪಟ್ಟಣದಲ್ಲಿರುವ ಮೂಡಲಗಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಗುರುವಾರ ವಿದ್ಯಾರ್ಥಿಯೊಬ್ಬನ ಶವ ಪತ್ತೆಯಾಗಿದೆ. ಸಂಸ್ಥೆಯಲ್ಲಿ ಒಂದನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಹಣಮಂತ ವಸಂತ ಬಂಡಿವಡ್ಡರ (6) ಮೃತ ಬಾಲಕ ಎಂದು ಗುರುತಿಸಲಾಗಿದೆ.

ಶಾಲಾ ಆವರಣದಲ್ಲಿ ಬಾಲಕ ಅನುಮಾನಾಸ್ಪದವಾಗಿ ಮೃತಪಟ್ಟಿರುವುದಕ್ಕೆ ಕುಟುಂಬದವರು ಆಕ್ರೋಶಗೊಂಡು, ಧರಣಿ, ಪ್ರತಿಭಟನೆ ನಡೆಸಿದರು. ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಾಲಕನನ್ನು ಕೊಲೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತಪಡಿಸಿರುವ ಕುಟುಂಬದವರು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ, ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.
ಘಟನೆ ಹಿನ್ನೆಲೆಯಲ್ಲಿ ಶಾಲೆಯ ಮೂವರು ಶಿಕ್ಷಕರನ್ನು ಚಿಕ್ಕೋಡಿ ಡಿಡಿಪಿಐ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ADVERTISEMENT

ಘಟನೆ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್‌ ಮತ್ತು ಶಿಕ್ಷಣಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಮೂಡಲಗಿ ಪೊಲೀಸ್‌ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.