ADVERTISEMENT

ಹೈ-.ಕ ಹುದ್ದೆ ಭರ್ತಿ ವಿಳಂಬ: ಜಗದೀಶ ಶೆಟ್ಟರ್ ಆರೋಪ

​ಪ್ರಜಾವಾಣಿ ವಾರ್ತೆ
Published 4 ಜುಲೈ 2015, 7:44 IST
Last Updated 4 ಜುಲೈ 2015, 7:44 IST

ಬೆಳಗಾವಿ: ಹೈದರಾಬಾದ್- ಕರ್ನಾಟಕ ಭಾಗದಲ್ಲಿ ಖಾಲಿ ಇರುವ 31 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯೇ ಆರಂಭವಾಗಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು.

‘ಈ ಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು 2015ರ ಜೂನ್ ಅಂತ್ಯದೊಳಗೆ ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಸಲದ ಬೆಳಗಾವಿ ಅಧಿವೇಶನದಲ್ಲಿ ಭರವಸೆ ನೀಡಿದ್ದರು. ಈ ವಿಚಾರವನ್ನು ನಾವು ವಿಧಾನಸಭೆಯಲ್ಲಿ ಪ್ರಸ್ತಾಪಿಸು ತ್ತೇವೆ’ ಎಂದು ಶೆಟ್ಟರ್ ತಿಳಿಸಿದರು. ವಿಧಾನಸಭೆಯ ಮೊಗಸಾಲೆಯಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಶುಕ್ರವಾರ ಮಾತನಾಡಿದರು.

‘ಸರ್ಕಾರದ ಎಷ್ಟು ಹುದ್ದೆಗಳು ಇಲ್ಲಿನವರಿಗೆ ದೊರೆಯಲಿವೆ ಎಂಬ ಲೆಕ್ಕಾಚಾರವನ್ನು ಹೈದರಾಬಾದ್-ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 371ನೇ ವಿಧಿಗೆ ತಿದ್ದುಪಡಿಗೆ ಮುನ್ನವೇ ಪೂರ್ಣಗೊಳಿ ಸೋಣ ಎಂದು ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಿದ್ದೆ. ಆದರೆ ಅವರು ಒಪ್ಪಿ ಕೊಳ್ಳಲಿಲ್ಲ’ ಎಂದು ಶೆಟ್ಟರ್ ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.