ADVERTISEMENT

ಬೆಳಗಾವಿ: 2 ಸೇತುವೆಗಳು ಮುಳುಗಡೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2018, 13:56 IST
Last Updated 7 ಜುಲೈ 2018, 13:56 IST

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಶನಿವಾರವೂ ಮಳೆ ಮುಂದುವರಿದ್ದು, ಚಿಕ್ಕೋಡಿ ತಾಲ್ಲೂಕಿನ ಎರಡು ಸೇತುವೆಗಳು ಮುಳುಗಡೆಯಾಗಿವೆ. ದೂಧ್‌ಗಂಗಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಮಲ್ಲಿಕವಾಡ– ದತ್ತವಾಡ ಮತ್ತು ಕೃಷ್ಣಾ ನದಿಗೆ ಅಡ್ಡಲಾಗಿರುವ ಕಟ್ಟಲಾಗಿರುವ ಕಲ್ಲೋಳ– ಯಡೂರ ಗ್ರಾಮಗಳ ಮಧ್ಯದ ಸೇತುವೆಗಳು ಮುಳುಗಡೆಯಾಗಿವೆ.

ಈ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ಮಾರ್ಗಗಳಿದ್ದು, ಜನರ ಸಂಪರ್ಕಕ್ಕೆ ತಡೆಯುಂಟಾಗಿಲ್ಲ. ನೆರೆಯ ಮಹಾರಾಷ್ಟ್ರದ ಗಡಿಯಲ್ಲಿರುವ ರಾಜಾಪುರ ಬ್ಯಾರೇಜ್‌ನಿಂದ 52,031 ಕ್ಯುಸೆಕ್‌ ನೀರು ಹೊರಬಿಡಲಾಗುತ್ತಿದೆ. ಇದರಿಂದ ಕೃಷ್ಣಾ ನದಿ ನೀರಿನ ಹರಿವು ಹೆಚ್ಚಳವಾಗಿದೆ. ಜಿಲ್ಲೆಯ ವಿವಿಧೆಡೆ ಶನಿವಾರ ಸಾಧಾರಣ ಮಳೆಯಾಗಿದೆ. ಬೆಳಗಾವಿ, ಖಾನಾಪುರ, ಚಿಕ್ಕೋಡಿ ಹಾಗೂ ಸುತ್ತಮುತ್ತ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT