ADVERTISEMENT

ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2017, 20:09 IST
Last Updated 20 ಜನವರಿ 2017, 20:09 IST
ವಿದ್ಯಾರ್ಥಿಗಳು ಸಮೂಹನೃತ್ಯ ಪ್ರದರ್ಶನ ನೀಡಿದರು
ವಿದ್ಯಾರ್ಥಿಗಳು ಸಮೂಹನೃತ್ಯ ಪ್ರದರ್ಶನ ನೀಡಿದರು   

ಬೆಂಗಳೂರು: ಹೆಬ್ಬಾಳ ಕೆಂಪಾಪುರದ ಸಿಂಧಿ ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಿದ್ದ ‘ಕ್ರೆಸಿಂಡೋ–2017’ ಅಂತರಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮಕ್ಕೆ ಗಾಯಕಿ ಶಮಿತಾ ಮಲ್ನಾಡ್‌ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಬಹಳಷ್ಟು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯ ಅನಾವರಣಕ್ಕೆ ವೇದಿಕೆಗಳು ಸಿಗುವುದಿಲ್ಲ. ಈ ಕಾಲೇಜಿನಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿವಿಧ ಕಾಲೇ ಜುಗಳ ವಿದ್ಯಾರ್ಥಿಗಳು ಸ್ನೇಹಿತರಾಗಲು ಮತ್ತು ಪ್ರತಿಭೆಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ಕಲ್ಪಿಸಿರುವುದು ಶ್ಲಾಘನೀಯ ಎಂದು ಪ್ರಶಂಸಿಸಿದರು.

ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತಂದು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿವರ್ಷ ಇಂತಹ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಪ್ರಾಂಶುಪಾಲ ಬಿ.ಎಸ್‌.ಶ್ರೀಕಂಠ ಅವರು ತಿಳಿಸಿದರು. ನಟರಾದ ಕೃಷ್ಣ, ಧನಂಜಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.