ADVERTISEMENT

ಅಕ್ರಮವಾಗಿ ಚಿನ್ನದ ಗಟ್ಟಿ ಸಾಗಣೆ: ಬಂಧನ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2014, 19:30 IST
Last Updated 21 ನವೆಂಬರ್ 2014, 19:30 IST

ಬೆಂಗಳೂರು: ಅಕ್ರಮವಾಗಿ ಚಿನ್ನದ ಗಟ್ಟಿ ಸಾಗಿಸುತ್ತಿದ್ದ ಪ್ರಯಾಣಿಕನೊಬ್ಬ ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಎಲ್‌) ಸೀಮಾಸುಂಕ (ಕಸ್ಟಮ್ಸ್‌) ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು, ಆರೋಪಿಯಿಂದ 2.50 ಕೆ.ಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ದುಬೈನಿಂದ ಬುಧವಾರ (ನ.19) ಬೆಳಿಗ್ಗೆ 9ಕ್ಕೆ ಕೆಐಎಎಲ್‌ಗೆ ಬಂದಿಳಿದ  ಆರೋಪಿಯನ್ನು ಅನುಮಾನದಿಂದ ನಿಲ್ದಾಣದ ನಿರ್ಗಮನ ದ್ವಾರದಲ್ಲಿ ತಪಾಸಣೆಗೆ ಒಳಪಡಿಸಿದಾಗ ರಟ್ಟಿನ ಪೆಟ್ಟಿಗೆಯಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಗೊತ್ತಾಯಿತು ಎಂದು ಕಸ್ಟಮ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಸ್ನೇಹಿತನೊಬ್ಬ ಬೆಂಗಳೂರಿನಲ್ಲಿರುವ ವ್ಯಕ್ತಿಗೆ ಆ ಚಿನ್ನದ ಗಟ್ಟಿಯನ್ನು ಕೊಡುವಂತೆ ಹೇಳಿ ಕಳುಹಿಸಿದ್ದ ಎಂದು ಆರೋಪಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.