ADVERTISEMENT

ಅಪಘಾತ: ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2015, 20:18 IST
Last Updated 31 ಮಾರ್ಚ್ 2015, 20:18 IST

ಹೊಸಕೋಟೆ: ಮಾಲೂರು ರಸ್ತೆಯ ಜಡಿಗೇನಹಳ್ಳಿ ಪ್ರೌಢಶಾಲೆ ಸಮೀಪದ ತಿರುವಿನಲ್ಲಿ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿದ್ದಾರೆ.  ತಮಿಳುನಾಡು ಮೂಲದ ರಂಜಿತ್ (35) ಮೃತರು.

ಮಾಲೂರಿನ ಬೋರ್ ವೆಲ್ ಕೊರೆಯುವ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು ಕಾರ್ಯನಿಮಿತ್ತ ಹೊಸಕೋಟೆ ಕಡೆ ಬೈಕ್ ನಲ್ಲಿ ಬರುತ್ತಿದ್ದರು. ಆಗ ಎದುರಿನಿಂದ ವೇಗವಾಗಿ ಬಂದ ಯಾವುದೊ ವಾಹನವೊಂದು ಡಿಕ್ಕಿ ಹೊಡೆದಿದೆ.

ಬೈಕ್ ನಿಂದ ಕೆಳಕ್ಕೆ ಬಿದ್ದ ರಂಜಿತ್ ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.