ADVERTISEMENT

‘ಆಸ್ತಿ ತೆರಿಗೆ ಸಂಗ್ರಹಕ್ಕೆ ಅಧಿಕಾರಿಗಳ ಅಸಹಕಾರ’

​ಪ್ರಜಾವಾಣಿ ವಾರ್ತೆ
Published 20 ಜುಲೈ 2017, 19:56 IST
Last Updated 20 ಜುಲೈ 2017, 19:56 IST

ಬೆಂಗಳೂರು: ‘ಆಸ್ತಿ ತೆರಿಗೆ ಸಂಗ್ರಹಕ್ಕೆ ಅಧಿಕಾರಿಗಳು ಸಹಕರಿಸುತ್ತಿಲ್ಲ. ಆಸ್ತಿ ತೆರಿಗೆ ವಸೂಲಿಗೆ ಕ್ರಮ ಕೈಗೊಳ್ಳುವಂತೆ 15 ಪತ್ರ ಬರೆದರೂ ಅಧಿಕಾರಿಗಳು ಸ್ಪಂದಿಸಿಲ್ಲ’ ಎಂದು ಬಿಬಿಎಂಪಿಯ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ. ಗುಣಶೇಖರ ಅಸಮಾಧಾನ ವ್ಯಕ್ತಪಡಿಸಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2014ರಿಂದ 2017ರ ಅವಧಿಯಲ್ಲಿ 343 ಬೃಹತ್‌ ಕಟ್ಟಡಗಳಿಗೆ ವಾಸಯೋಗ್ಯ (ಒ.ಸಿ) ಪ್ರಮಾಣಪತ್ರ  ನೀಡಲಾಗಿದೆ. ಈ ಕಟ್ಟಡಗಳಲ್ಲಿ  25 ಸಾವಿರ ಘಟಕಗಳು (ಮನೆಗಳು) ಇವೆ. ಕೆಲವು ಕಟ್ಟಡಗಳಿಂದ ಒಂದು ವರ್ಷದ ಆಸ್ತಿ ತೆರಿಗೆಯನ್ನು ಮಾತ್ರ ಸಂಗ್ರಹ ಮಾಡಲಾಗಿದೆ. ಕೆಲವು ಕಟ್ಟಡಗಳ ತೆರಿಗೆ ಸಂಗ್ರಹಿಸಿಲ್ಲ. ಇದರಿಂದ ಪಾಲಿಕೆಯ ಖಜಾನೆಗೆ ₹200 ಕೋಟಿ ನಷ್ಟ ಉಂಟಾಗಿದೆ’ ಎಂದರು.

‘ತೆರಿಗೆ ಸಂಗ್ರಹಕ್ಕೆ ಅಧಿಕಾರಿಗಳು ಉದಾಸೀನ ತೋರುತ್ತಿದ್ದಾರೆ. ಆಯುಕ್ತರ ಆದೇಶವನ್ನೂ ಪಾಲಿಸುತ್ತಿಲ್ಲ. ಕೆಲವು ಭ್ರಷ್ಟ ಅಧಿಕಾರಿಗಳು ಆಸ್ತಿ ಮಾಲೀಕರ ಜತೆಗೆ ಶಾಮೀಲಾಗಿದ್ದಾರೆ’ ಎಂದು ಅವರು ಆರೋಪಿಸಿದರು.

ADVERTISEMENT

‘ಅಧಿಕಾರಿಗಳು ಒಂದು ವಾರದೊಳಗೆ ಬೃಹತ್‌ ಕಟ್ಟಡಗಳಿಂದ ಆಸ್ತಿ ತೆರಿಗೆ ವಸೂಲಿ ಮಾಡಬೇಕು. ಇಲ್ಲದಿದ್ದರೆ ಬಿಬಿಎಂಪಿ ಪುನರ್‌ರಚನಾ ಸಮಿತಿಯಿಂದ ಈ ಪ್ರಕರಣದ ಬಗ್ಗೆ ತನಿಖೆ  ಮಾಡಿಸುತ್ತೇನೆ. ಬಳಿಕ ಅದನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸುತ್ತೇನೆ’ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.