ADVERTISEMENT

ಆ. 12 ರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಭೇಟಿ

​ಪ್ರಜಾವಾಣಿ ವಾರ್ತೆ
Published 18 ಜುಲೈ 2017, 19:51 IST
Last Updated 18 ಜುಲೈ 2017, 19:51 IST

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ಷಾ ಆಗಸ್ಟ್‌ 12 ರಿಂದ ಮೂರು ದಿನಗಳ ಕಾಲ ನಗರಕ್ಕೆ ಭೇಟಿ ನೀಡಲಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯ ತಯಾರಿ ಬಗ್ಗೆ ರಾಜ್ಯ ನಾಯಕರ ಜತೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮೂರು ದಿನಗಳ ಕಾಲ ಏನೆಲ್ಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂಬ ಬಗ್ಗೆ ಪಟ್ಟಿಯನ್ನು ಅಮಿತ್‌ಷಾ ಅವರಿಗೆ ಕಳುಹಿಸಲಾಗಿದೆ.  ಅವರ ಒಪ್ಪಿಗೆ ಬಂದ ಬಳಿಕ ಅಧಿಕೃತಗೊಳಿಸಲಾಗುವುದು ಎಂದು ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.