ADVERTISEMENT

ಇಂದಿನಿಂದ ‘ಕರ್ಮಣಿ ಉತ್ಸವ–17’

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2017, 20:29 IST
Last Updated 6 ಡಿಸೆಂಬರ್ 2017, 20:29 IST

ಬೆಂಗಳೂರು: ಮಹಿಳೆಯರು ಉತ್ಪಾದಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ‘ಕರ್ಮಣಿ ಉತ್ಸವ– 2017’ ಇದೇ 7ರಿಂದ 9ರ ವರೆಗೆ ಮಹಾಲಕ್ಷ್ಮಿ ಲೇಔಟ್‌ನ ವಿವೇಕಾನಂದ ಆಟದ ಮೈದಾನದಲ್ಲಿ ನಡೆಯಲಿದೆ ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಭಾರತಿ ಶಂಕರ್‌ ತಿಳಿಸಿದರು.

ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಸಂಯೋಜನೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ ಅವರು ಸಂಜೆ 4 ಗಂಟೆಗೆ ಉದ್ಘಾಟಿಸಲಿದ್ದಾರೆ ಎಂದರು.

ನಿಗಮದ ಮಾರುಕಟ್ಟೆ ನೆರವು ಯೋಜನೆ ಅಡಿ ಮಹಿಳಾ ಉದ್ದಿಮೆದಾರರು ಮತ್ತು ಸ್ವ–ಸಹಾಯ ಸಂಘಗಳ ಮಹಿಳೆಯರು ಉತ್ಪಾದಿಸಿದ ವಸ್ತುಗಳಿಗೆ ಮಾರುಕಟ್ಟೆ ಒದಗಿಸಲಾಗುವುದು ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.