ADVERTISEMENT

ಉದ್ಯಾನಗಳಿಗೆ ಸಂಸ್ಕರಿಸಿದ ತ್ಯಾಜ್ಯ ನೀರು ಪೂರೈಕೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2018, 20:02 IST
Last Updated 22 ಮಾರ್ಚ್ 2018, 20:02 IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಎಲ್ಲ ಉದ್ಯಾನಗಳಿಗೆ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಒದಗಿಸುವಂತೆ ಕೋರಿ ಜಲಮಂಡಳಿಯ ಅಧ್ಯಕ್ಷ ತುಷಾರ್‌ ಗಿರಿನಾಥ್‌ ಅವರಿಗೆ ಮೇಯರ್‌ ಆರ್‌.ಸಂಪತ್‌ ರಾಜ್‌ ಮನವಿ ನೀಡಿದರು.

ನೀರಿನ ಮಿತ ಬಳಕೆ ಹಾಗೂ ಸಂಸ್ಕರಿಸಿದ ತ್ಯಾಜ್ಯ ನೀರಿನ ಬಳಕೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕಿದೆ. ಇದಕ್ಕೆ ಪಾಲಿಕೆ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುತ್ತದೆ. ನಗರದಲ್ಲಿ ಬೀಳುವ ಮಳೆ ನೀರು ವ್ಯರ್ಥವಾಗದಂತೆ ಇಂಗುಗುಂಡಿಗಳನ್ನು ನಿರ್ಮಿಸಬೇಕು. ನಗರದಲ್ಲಿರುವ ವಸತಿ ಸಮುಚ್ಚಯಗಳಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಅದರ ನೀರನ್ನು ಮರುಬಳಕೆ ಮಾಡಿಕೊಳ್ಳುವ ಷರತ್ತು ವಿಧಿಸಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.

ಭವಿಷ್ಯದಲ್ಲಿ ಕುಡಿಯುವ ನೀರಿನ ಬೇಡಿಕೆ ಹೆಚ್ಚಲಿದೆ. ಕಾವೇರಿ 5ನೇ ಹಂತ ಕಾಮಗಾರಿ ಮುಗಿದ ಬಳಿಕವೂ ಬೇಡಿಕೆ ಮುಂದುವರಿಯಲಿದೆ. ಈ ಸಮಸ್ಯೆಯನ್ನು ನಿವಾರಿಸುವ ಉದ್ದೇಶದಿಂದ ಶರಾವತಿ ನದಿಯಿಂದ ರಾಜಧಾನಿಗೆ ನೀರು ಪೂರೈಸುವ ಯೋಜನೆ ಕೈಗೆತ್ತಿಕೊಳ್ಳುವ ಪ್ರಸ್ತಾವವನ್ನು ಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವರಿಗೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.