ADVERTISEMENT

ಉದ್ಯಾನದಲ್ಲಿ ರಸ್ತೆ ನಿರ್ಮಾಣ: ದೂರು

​ಪ್ರಜಾವಾಣಿ ವಾರ್ತೆ
Published 23 ಮೇ 2015, 20:23 IST
Last Updated 23 ಮೇ 2015, 20:23 IST

ಬೆಂಗಳೂರು: ಸಿದ್ದಾಪುರ ವಾರ್ಡ್‌ನ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ಗೆ ನೇರವಾಗಿ ಹೊಸೂರು ರಸ್ತೆಗೆ ಸಂಪರ್ಕ ಕಲ್ಪಿಸಿಕೊಡಲು ಉದ್ಯಾನದಲ್ಲಿ ಮಾರ್ಗ ನಿರ್ಮಾಣ ಮಾಡಲಾಗುತ್ತಿದ್ದು, ಅದನ್ನು ತಡೆಗಟ್ಟಬೇಕು ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌. ರಮೇಶ್‌ ಅವರು ಶನಿವಾರ ಬಿಎಂಟಿಎಫ್‌ಗೆ ದೂರು ನೀಡಿದ್ದಾರೆ.

ಪಾಲಿಕೆ ಒಡೆತನದ ಬಂಡೆ ಪಾರ್ಕ್‌, ಒಂದೆಡೆ ಹೊಸೂರು ರಸ್ತೆ ಹಾಗೂ ಇನ್ನೊಂದೆಡೆ ಅಪಾರ್ಟ್‌ಮೆಂಟ್‌ಗೆ ಹೊಂದಿಕೊಂಡಿದೆ. ಅಪಾರ್ಟ್‌ಮೆಂಟ್‌ಗೆ ನೇರವಾಗಿ ಹೊಸೂರು ರಸ್ತೆಗೆ ಸಂಪರ್ಕ ಕಲ್ಪಿಸಿಕೊಡಲು ಉದ್ಯಾನದ ಜಾಗ ಬಳಕೆ ಮಾಡಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಸಾರ್ವ ಜನಿಕರ ಆಸ್ತಿಯನ್ನು ಕೆಲವರ ಬಳಕೆಗೆ ನೀಡುವುದು ಸರಿಯಲ್ಲ. ಅಲ್ಲಿ ಅಪಾರ್ಟ್‌ ಮೆಂಟ್‌ ನಿವಾಸಿಗಳ ವಾಹನಗಳ ಓಡಾಟಕ್ಕೆ ಬಿಟ್ಟುಕೊಟ್ಟಿರು ವುದು ಅಪ ರಾಧ. ಇದಕ್ಕೆ ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳ ಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.