ADVERTISEMENT

ಉಪ ಚುನಾವಣೆಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2017, 19:54 IST
Last Updated 21 ಜನವರಿ 2017, 19:54 IST

ಬೆಂಗಳೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಫೆ. 3ರಂದು ನಡೆಯಲಿದ್ದು, ಫೆ. 6ರಂದು ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತೆ ಎಂ. ವಿ. ಜಯಂತಿ ಶನಿವಾರ ತಿಳಿಸಿದರು.

ಕಾಂಗ್ರೆಸ್ ಪಕ್ಷದ ಟಿ.ಎಸ್. ನಿರಂಜನ್, ಬಿಜೆಪಿಯ ಪಿ.ಆರ್. ಬಸವರಾಜು, ಜೆಡಿಎಸ್‌ನ  ರಮೇಶ್ ಬಾಬು, ಕರುನಾಡು ಪಕ್ಷದ ಬಿ. ವೆಂಕಟೇಶ್ ಹಾಗೂ13 ಪಕ್ಷೇತರರು ಸೇರಿ 17 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕೋಲಾರದ ಮಂಜುಳಾ ರಾಜಗೋಪಾಲ್ ಕಣದಲ್ಲಿರುವ ಏಕೈಕ ಮಹಿಳಾ ಅಭ್ಯರ್ಥಿ.  ಫೆ.1 ರಂದು ಸಂಜೆ 4 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ ಎಂದರು.

ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿವೆ. ಈ ಜಿಲ್ಲೆಗಳ ಪ್ರತಿ ತಾಲ್ಲೂಕು ಕಚೇರಿಗಳಲ್ಲಿ ಮತದಾನ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ. 15,139 ಪುರುಷ ಹಾಗೂ 6,215 ಮಹಿಳೆಯರು ಸೇರಿ ಒಟ್ಟು 21,354 ಮಂದಿ ಮತ ಚಲಾಯಿಸಲಿದ್ದಾರೆ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.