ADVERTISEMENT

ಎಂ.ಆರ್. ಲಸಿಕೆ: ಉಡುಪಿ ಪ್ರಥಮ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2017, 20:08 IST
Last Updated 18 ಫೆಬ್ರುವರಿ 2017, 20:08 IST
ಬೆಂಗಳೂರು: ದಡಾರಾ ಹಾಗೂ ರುಬೆಲ್ಲಾ  ರೋಗ ನಿರೋಧಕ ಲಸಿಕೆ ನೀಡುವ ಅಭಿಯಾನದಲ್ಲಿ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು,  ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ಕೊನೆಯ ಸ್ಥಾನದಲ್ಲಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ಸುಬೋಧ್‌ ಯಾದವ್ ತಿಳಿಸಿದರು.
 
ರಾಷ್ಟ್ರೀಯ ಲಸಿಕಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿಕಾಸಸೌಧದಲ್ಲಿ ಶನಿವಾರ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.  
 
ದಡಾರ ಹಾಗೂ ರುಬೆಲ್ಲಾ ರೋಗ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ.  ಅಂತಹ ಪ್ರಕರಣಗಳ ಕುರಿತು ಪೊಲೀಸರ ಗಮನಕ್ಕೆ ತಂದು ಪ್ರಕರಣ ದಾಖಲಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.