ADVERTISEMENT

ಎಟಿಎಂ ಘಟಕದಲ್ಲಿ ಹಲ್ಲೆ ಪ್ರಕರಣ ಆರೋಪಿ ಸುಳಿವಿಗೆ ಬಹುಮಾನ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2014, 19:52 IST
Last Updated 28 ನವೆಂಬರ್ 2014, 19:52 IST

ಬೆಂಗಳೂರು: ಎನ್‌.ಆರ್‌.ಚೌಕದ ಕಾರ್ಪೊರೇಷನ್‌ ಬ್ಯಾಂಕ್‌ ಎಟಿಎಂ ಘಟಕದಲ್ಲಿ ಜ್ಯೋತಿ ಉದಯ್‌ ಅವರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ ₨ 10 ಲಕ್ಷ ಬಹುಮಾನ ನೀಡಲಾಗುವುದು ಎಂದು ನಗರ ಪೊಲೀಸ್‌್ ಕಮಿಷನರ್‌ ಎಂ.ಎನ್‌. ರೆಡ್ಡಿ ಅವರು ಘೋಷಿಸಿದ್ದಾರೆ.

ಡಿಸೆಂಬರ್‌ 2012ರಲ್ಲಿ ಆರೋ­ಪಿಯ ಬಗ್ಗೆ ಸುಳಿವು ನೀಡಿದವರಿಗೆ ₨ 5 ಲಕ್ಷ ಬಹುಮಾನ ನೀಡಲಾಗುವುದು ಎಂದು ಘೋಷಿಸಲಾಗಿತ್ತು. ಘಟನೆ ನಡೆದು ಒಂದು ವರ್ಷವಾದರೂ ಆರೋ­ಪಿಯ  ಬಗ್ಗೆ ಸುಳಿವು ಸಿಕ್ಕಿಲ್ಲ. ಹೀಗಾಗಿ ಆತನ ಪತ್ತೆ ಕಾರ್ಯದಲ್ಲಿ ಸಾರ್ವಜ­ನಿಕರ ನೆರವು ಪಡೆಯಲು ಬಹುಮಾನದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಆರೋಪಿಯು, 2013ರ ನ.19ರಂದು  ಎಟಿಎಂ ಘಟಕದಲ್ಲಿ ಜ್ಯೋತಿ ಅವರ ಮೇಲೆ ಬರ್ಬರವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದ. ಆತನ ಪತ್ತೆಗೆ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಪಿ.ಹರಿಶೇಖರನ್‌ ಅವರ ನೇತೃತ್ವದಲ್ಲಿ ಹತ್ತು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.