ADVERTISEMENT

ಎತ್ತಿನಹೊಳೆ ಯೋಜನೆಯಿಂದ ಅಂತರ್ಜಲವೂ ವೃದ್ಧಿ: ಮೊಯಿಲಿ

​ಪ್ರಜಾವಾಣಿ ವಾರ್ತೆ
Published 26 ಜೂನ್ 2016, 20:00 IST
Last Updated 26 ಜೂನ್ 2016, 20:00 IST

ಬೆಂಗಳೂರು: ‘ಎತ್ತಿನಹೊಳೆ ಯೋಜನೆ ಪೂರ್ಣಗೊಂಡ ಬಳಿಕ  ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಅಂತರ್ಜಲವೂ ವೃದ್ಧಿಯಾಗಲಿದೆ’ ಎಂದು ಸಂಸದ ಎಂ.ವೀರಪ್ಪ ಮೊಯಿಲಿ ಹೇಳಿದರು. ಮಾಗಡಿ ರಸ್ತೆಯ ಮಾಚೋಹಳ್ಳಿ ಕಾಲೋನಿಯಲ್ಲಿ ಭಾನುವಾರ ಶುದ್ಧ ನೀರಿನ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಬಯಲುಸೀಮೆ ಪ್ರದೇಶಗಳಿಗೆ ನೀರುಣಿಸುವ ಈ ಯೋಜನೆಯ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿವೆ.  ಬಯಲುಸೀಮೆ ಜಿಲ್ಲೆಗಳ ನೀರಿನ ಸಮಸ್ಯೆ ಬಗೆಹರಿಯುವ ಕಾಲ ಸನ್ನಿಹಿತವಾಗಿದೆ’ ಎಂದರು.

ವಿಧಾನಪರಿಷತ್‌ ಸದಸ್ಯ ಎಂ.ನಾರಾಯಣಸ್ವಾಮಿ,ಮಾತನಾಡಿ ‘ಪ್ರತಿಯೊಬ್ಬರೂ ಆರೋಗ್ಯವಂತರಾಗಿರಬೇಕು ಎಂಬ ಉದ್ದೇಶದಿಂದ ಅಗತ್ಯವಿರುವ ಕಡೆ ಶುದ್ಧ ನೀರಿನ ಘಟಕಗಳನ್ನು ಪ್ರಾರಂಭಿಸಲಾಗುತ್ತಿದೆ’ ಎಂದರು.  

ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಬಿ.ಆರ್‌.ಅನ್ನಪೂರ್ಣೇಶ್ವರಿ ಮುರಳಿ ಅವರು ಮಾತನಾಡಿ, ‘ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಬಿಬಿಎಂಪಿ ಮಾದರಿಯಲ್ಲೇ ಅನುಷ್ಠಾನಗೊಳಿಸಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.