ADVERTISEMENT

ಎನ್‌ಎಸ್‌ಎಸ್‌ ಶಿಬಿರ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2018, 19:48 IST
Last Updated 21 ಮಾರ್ಚ್ 2018, 19:48 IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜಿನ ವತಿಯಿಂದ ಕೊಮ್ಮಘಟ್ಟದಲ್ಲಿ ಆಯೋಜಿಸಿದ್ದ ಎನ್‌ಎಸ್‌ಎಸ್‌ ವಿಶೇಷ ವಾರ್ಷಿಕ ಶಿಬಿರವನ್ನು ನಗರ ಜಿಲ್ಲಾ ಪಂಚಾಯಿತಿ ಸದಸ್ಯೆ ಲತಾ ಹನುಮಂತೇಗೌಡ ಬುಧವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ಸ್ವಚ್ಛತೆ ಬಗ್ಗೆ ಹಳ್ಳಿಗರಲ್ಲಿ ಅರಿವು ಮೂಡಿಸುವ ಕೆಲಸವನ್ನು ಎನ್‌ಎಸ್‌ಎಸ್‌ ಸ್ವಯಂಸೇವಕರು ಮಾಡುತ್ತಿದ್ದಾರೆ. ಈ ಶಿಬಿರದಿಂದ ಸ್ವಯಂಸೇವಕರ ವ್ಯಕ್ತಿತ್ವ ವಿಕಸನವೂ ಆಗಲಿದೆ. ಅವರಿಗೆ ಬೇಕಾದ ಸಹಕಾರವನ್ನು ಗ್ರಾಮಸ್ಥರು ನೀಡಬೇಕು’ ಎಂದರು.

ಸಹಪ್ರಾಧ್ಯಾಪಕ ದಶರಥ್, ‘ಸ್ವಚ್ಛತೆ ವಿಚಾರದಲ್ಲಿ ಭಾರತ ವಿದೇಶಗಳಿಗಿಂತ ಹಿಂದುಳಿದಿದೆ. ಈ ನಿಟ್ಟಿನಲ್ಲಿ ಸ್ವಚ್ಚತೆಯ ಮಹತ್ವದ ಬಗ್ಗೆ ಸ್ವಯಂಸೇವಕರು ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು’ ಎಂದರು. ಪ್ರಾಂಶುಪಾಲ ಡಾ.ವಿ. ಸುದೇಶ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.