ADVERTISEMENT

ಎನ್‌ಎಸ್‌ಎಸ್‌ ಸಂಸ್ಥಾಪನಾ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2017, 19:30 IST
Last Updated 21 ಅಕ್ಟೋಬರ್ 2017, 19:30 IST
ಎನ್‌ಎಸ್‌ಎಸ್‌ ಸಂಸ್ಥಾಪನಾ ಕಾರ್ಯಕ್ರಮ
ಎನ್‌ಎಸ್‌ಎಸ್‌ ಸಂಸ್ಥಾಪನಾ ಕಾರ್ಯಕ್ರಮ   

ಬೆಂಗಳೂರು: ಕೆ.ಆರ್.ಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ಹಾಗೂ ಪುನಶ್ಚೇತನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಪ್ರಯುಕ್ತ ಪರಿಸರ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಭೂಮಿತಾಯಿ ಬಳಗದವರು ಗೀತಗಾಯನ ನಡೆಸಿಕೊಟ್ಟರು.

‘ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಬೇಕು. ಆಗ ಸದೃಢ ವ್ಯಕ್ತಿತ್ವ ನಿರ್ಮಾಣವಾಗಲು ಸಾಧ್ಯ. ಇದಕ್ಕೆ ಆತ್ಮವಿಶ್ವಾಸ ಬಹುಮುಖ್ಯ’ ಎಂದು ಕ್ರಿಕೆಟ್‌ ತರಬೇತುದಾರ ಪ್ಯಾಟ್ರಿಕ್ ರಾಜ್‍ಕುಮಾರ್ ಅವರು ತಿಳಿಸಿದರು. ಎನ್‌ಎಸ್‌ಎಸ್‌ ಕಾರ್ಯಕ್ರಮ ಅಧಿಕಾರಿ ಡಾ.ವಿಜಯಕುಮಾರ್, ‘ವಿದ್ಯಾರ್ಥಿಗಳು ನಿಸ್ವಾರ್ಥ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ನಾಯಕತ್ವ ಗುಣಗಳನ್ನು ರೂಢಿಸಿಕೊಂಡು ಮುನ್ನಡೆಯಬೇಕು’ ಎಂದು ಸಲಹೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.