ADVERTISEMENT

ಎಪಿಪಿ ಪರೀಕ್ಷೆ: ಅಂಕ ತಿದ್ದಿದ ಆರೋಪಿಗೆ ಜಾಮೀನು ಇಲ್ಲ

​ಪ್ರಜಾವಾಣಿ ವಾರ್ತೆ
Published 4 ಮೇ 2017, 19:47 IST
Last Updated 4 ಮೇ 2017, 19:47 IST

ಬೆಂಗಳೂರು: ಸಹಾಯಕ ಪಬ್ಲಿಕ್‌ ಪ್ರಾಸಿಕ್ಯೂಟರ್ (ಎಪಿಪಿ) ಹುದ್ದೆಗಳ ನೇಮಕಾತಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನ ಅಂಕಗಳನ್ನು ತಿದ್ದಿದ ಪ್ರಕರಣದಲ್ಲಿನ ಆರೋಪಿ ನಾರಾಯಣ ಸ್ವಾಮಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ನಾರಾಯಣ ಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು  ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಜಾಗೊಳಿಸಿದೆ.
ನಾರಾಯಣ ಸ್ವಾಮಿ ಪ್ರಾಸಿಕ್ಯೂಷನ್‌ ನಿರ್ದೇಶನಾಲಯದ ಕೇಂದ್ರ ಕಚೇರಿಯ ಸಹಾಯಕರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT