ADVERTISEMENT

ಎಫ್‌ಐಆರ್‌ ರದ್ದತಿಗೆ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್‌

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2016, 19:42 IST
Last Updated 19 ಅಕ್ಟೋಬರ್ 2016, 19:42 IST

ಬೆಂಗಳೂರು: ಜಮೀನು ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ದಾಸರಹಳ್ಳಿ ಶಾಸಕ ಎಸ್‌.ಮುನಿರಾಜು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಪೂರ್ಣಗೊಳಿಸಿದ್ದು ಆದೇಶ ಕಾಯ್ದಿರಿಸಿದೆ.

ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠವು, ಬುಧವಾರ  ವಾದ ಪ್ರತಿವಾದ ಆಲಿಕೆಯನ್ನು ಪೂರೈಸಿತು.

ಮುನಿರಾಜು ಅವರು ನಕಲಿ ದಾಖಲೆ ಸೃಷ್ಟಿಸಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ನಗರದ ಕೆರೆಗುಡ್ಡದ ಹಳ್ಳಿಯಲ್ಲಿನ 21 ಗುಂಟೆ ಭೂಮಿಯನ್ನು ತಮ್ಮ ಹೆಸರಿಗೆ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಪುಟ್ಟಸ್ವಾಮಿ ಎಂಬುವವರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ದೂರು ನೀಡಿದ್ದರು.
ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಮುನಿರಾಜು ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಮುನಿರಾಜು ಬಿಜೆಪಿ ಶಾಸಕರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.