ADVERTISEMENT

ಏಕರೂಪದ ಕೌನ್ಸೆಲಿಂಗ್‌: ಇಂದು ಸಭೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2017, 20:10 IST
Last Updated 21 ಫೆಬ್ರುವರಿ 2017, 20:10 IST

ಬೆಂಗಳೂರು: ವೈದ್ಯಕೀಯ, ದಂತವೈದ್ಯ ಕೀಯ ಮತ್ತು ಎಂಜಿನಿಯರಿಂಗ್‌ ಕೋರ್ಸ್‌ಗಳ  ಪ್ರವೇಶಕ್ಕಾಗಿ ಏಕರೂಪ ಕೌನ್ಸೆಲಿಂಗ್‌ ನಡೆಸುವ ಸಂಬಂಧ ಸರ್ಕಾರ, ಖಾಸಗಿ ಕಾಲೇಜುಗಳ ಮಧ್ಯೆ ಬುಧವಾರ ಸಭೆ ನಡೆಯಲಿದೆ.

ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಪಾಲ್ಗೊಳ್ಳುವರು. ಅನುದಾನ ರಹಿತ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಸಂಘ, ಕಾಮೆಡ್‌–ಕೆ, ವೃತ್ತಿಪರ ಅಲ್ಪ ಸಂಖ್ಯಾತ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿ ಗಳನ್ನು ಸಭೆಗೆ ಆಹ್ವಾನಿಸಲಾಗಿದೆ.

ವೈದ್ಯಕೀಯ ಕೋರ್ಸ್‌ಗಳಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ) ಕಡ್ಡಾಯ ವಾಗಿದ್ದರೆ, ಎಂಜಿನಿಯರಿಂಗ್‌ ಕೋರ್ಸ್‌ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮತ್ತು ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು ಕಾಮೆಡ್‌– ಕೆ ಪರೀಕ್ಷೆ ನಡೆಸಲಿವೆ.

ADVERTISEMENT

‘ಪರೀಕ್ಷೆಗಳು ಪ್ರತ್ಯೇಕವಾಗಿ ನಡೆದರೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಏಕರೂಪ ಕೌನ್ಸೆಲಿಂಗ್ ನಡೆಯಲಿ’ ಎಂಬುದು ಸರ್ಕಾರದ ಉದ್ದೇಶ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.